ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್  ಕಂಟೇನರ್ ಲಾರಿಗೆ ಡಿಕ್ಕಿ  ; ಓರ್ವ ಸಾವು, 11 ಮಂದಿಗೆ ಗಾಯ

20-01-26 12:18 pm       HK News Desk   ಕರ್ನಾಟಕ

ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ.

ಚಿಕ್ಕಬಳ್ಳಾಪುರ, ಜ 19 : ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ.

ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. 12 ಮಂದಿ ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಇಬ್ಬರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಹಾರ ಮೂಲಕ 20 ವರ್ಷದ ಸುಹಾಸ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕಂಟೇನರ್ ವಾಹನದಲ್ಲಿ ತನ್ನ ಸ್ನೇಹಿತರೊಂದಿಗೆ ಬಿಹಾರಕ್ಕೆ ಸುಹಾಸ್ ತೆರಳುತ್ತಿದ್ದ ಎನ್ನಲಾಗಿದೆ. ಇನ್ನು ಹೊಸ ಬೈಕುಗಳನ್ನ ಹೊತ್ತು ಹೈದರಾಬಾದ್ ಕಡೆಗೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಮಂಗಳೂರು ಮೂಲದ ಸುಗಮ ಟ್ರಾವೆಲ್ಸ್ ಬಸ್ ಡಿಕ್ಕಿ ಹೊಡೆದಿದೆ. ಘಟನೆ ನಂತರ ಸ್ಥಳಕ್ಕೆ ಎಸ್‌ಪಿ ಕುಶಾಲ್ ಚೌಕ್ಸಿ ಸೇರಿದಂತೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ರು.

ಅಪಘಾತದಲ್ಲಿ ಬಸ್‌ ಗುದ್ದಿದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ಸು ಕಂಟೈನರ್‌ನ ಒಳಗೆ ಸಿಲುಕಿಕೊಂಡಿದ್ದು, ಓರ್ವ ಪ್ರಯಾಣಿಕನ ಕಾಲು ಸಹ ಸಿಲುಕಿ ನರಳಾಡಿರೋದು ಕಂಡುಬಂದಿದೆ. ಗಂಟೆಗಟ್ಟಲೆ ಹರಸಹಾಸ ಪಟ್ಟು ಕೊನೆಗೆ ಕಟಿಂಗ್ ಮಿಷನ್ ಮೂಲಕ ರಾಡುಗಳನ್ನ ಕಟ್ ಮಾಡಿ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.

A sleeper coach bus traveling from Mysuru to Mantralayam collided with a container lorry near Agalagurki in Chikkaballapur district around midnight. The accident left one person dead and 11 others injured. The deceased, identified as 20-year-old Suhas from Bihar, succumbed to injuries at a Bengaluru hospital. Several passengers were trapped in the mangled bus and were rescued after hours using cutting equipment.