ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ; ಹಣ ಸಮೇತ ಲೋಕಾಯುಕ್ತ ಬಲೆಗೆ ಬಿದ್ದ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು, ವಿಡಿಯೋ ವೈರಲ್ !

29-01-26 11:03 pm       Bangalore Correspondent   ಕರ್ನಾಟಕ

4 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಬಲೆಗೆ ಬಿದ್ದದ್ದಾರೆ. ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್‌ಪೆಕ್ಟರ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು, ಜ 29 : 4 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಬಲೆಗೆ ಬಿದ್ದದ್ದಾರೆ. ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್‌ಪೆಕ್ಟರ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. 

ಕೆಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದು ಠಾಣೆಯ ಮೆಟ್ಟಿಲೇರಿತ್ತು. ಈ ಪ್ರಕರಣವನ್ನು ಇತ್ಯರ್ಥಪಡಿಸಲು ಅಥವಾ ದೂರುದಾರರಿಗೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ, ಚೀಟಿ ವ್ಯವಹಾರದ ದೂರಿನಲ್ಲಿ ವ್ಯಕ್ತಿಯೊಬ್ಬರ ಹೆಸರನ್ನು ಆರೋಪಿ ಪಟ್ಟಿಗೆ ಸೇರಿಸುವುದಾಗಿ ಅಥವಾ ಸೇರಿಸದೇ ಇರಲು ಬೆದರಿಕೆ ಹಾಕಿ ಹಣಕ್ಕೆ ಪೀಡಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ಪ್ರಕರಣವನ್ನು ಇತ್ಯರ್ಥಪಡಿಸಲು ಗೋವಿಂದರಾಜು ಬರೋಬ್ಬರಿ 4 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಚ್ಛಿಸದ ದೂರುದಾರರು ನೇರವಾಗಿ ಲೋಕಾಯುಕ್ತ ಕಚೇರಿಯನ್ನು ಸಂಪರ್ಕಿಸಿ ದೂರು ನೀಡಿದ್ದರು.

KP Agrahara police inspector Govindaraju was caught red-handed by the Lokayukta while accepting a ₹4 lakh bribe to settle a chit fund case. The trap operation, led by the Lokayukta SP, has sparked outrage, with the arrest video now going viral.