ಬ್ರೇಕಿಂಗ್ ನ್ಯೂಸ್
02-02-26 05:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.2 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು, ಬನ್ನೇರುಘಟ್ಟ ಸಮೀಪ ಹಾಡಹಗಲೇ ಸಿನಿಮೀಯ ರೀತಿ ನಡೆದ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗ್ಯಾಂಗ್, ಬರೋಬ್ಬರಿ 31,38,625 ರು. ನಗದು ದೋಚಿರುವ ಘಟನೆ ಬನ್ನೇರುಘಟ್ಟ ಬಳಿ ನಡೆದಿದೆ.
ಕೈಲಾಸ್ ಎಂಬ ಯುವಕ, ರಾಕೇಶ್ ಎಂಬವರ ಬಳಿ ಕ್ಯಾಷ್ ಕಲೆಕ್ಟಿಂಗ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಉಡಾನ್ ಕಂಪನಿಯ ವಿವಿಧ ಬ್ರಾಂಚ್‌ಗಳಿಗೆ ಭೇಟಿ ನೀಡಿ ಹಣ ಸಂಗ್ರಹಿಸುವ ಜವಾಬ್ದಾರಿ ಹೊಂದಿದ್ದ. ಭಾನುವಾರ ಸಂಜೆ ಎಂದಿನಂತೆ ವಿವಿಧ ಶಾಖೆಗಳಿಂದ ಒಟ್ಟು ₹31,38,625 ಹಣವನ್ನು ಸಂಗ್ರಹಿಸಿದ್ದ ಕೈಲಾಸ್, ಆ ಹಣವನ್ನು ತನ್ನ ಜುಪಿಟರ್ ಸ್ಕೂಟರ್‌ನ ಡಿಕ್ಕಿಯಲ್ಲಿ ಇಟ್ಟುಕೊಂಡು ಸಂಚರಿಸುತ್ತಿದ್ದ.
ಭಾನುವಾರ ಸಂಜೆ ಸುಮಾರು 4.20ರ ಸುಮಾರಿಗೆ ಬನ್ನೇರುಘಟ್ಟದತ್ತ ಸಾಗುತ್ತಿದ್ದ ವೇಳೆ, ಎರಡು ಬೈಕ್‌ಗಳಲ್ಲಿ ಬೆನ್ನತ್ತಿಕೊಂಡು ಬಂದ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಕೈಲಾಸ್‌ನ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ್ದಾರೆ. ಲಾಂಗ್ ತೋರಿಸಿ ಹಲ್ಲೆಗೆ ಯತ್ನಿಸಿದ ಆರೋಪಿಗಳು, ಕೈಲಾಸ್‌ನನ್ನು ಬೆದರಿಸಿ ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ.
ದರೋಡೆಕೋರರು ಸುಮಾರು ಒಂದು ಕಿಲೋಮೀಟರ್ ದೂರದ ವರೆಗೆ ಸ್ಕೂಟರ್ ಚಲಾಯಿಸುತ್ತ ಹೋಗಿದ್ದು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಅದರ ಡಿಕ್ಕಿಯಲ್ಲಿದ್ದ 31 ಲಕ್ಷ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.
ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಬನ್ನೇರುಘಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದು, ದರೋಡೆ ಪ್ರಕರಣ ದಾಖಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳ ಪರಿಶೀಲನೆ ಮೂಲಕ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
Bike-borne men attacked an employee of a private firm, 'Udaan', in broad daylight and escaped with Rs 31 lakh cash.@BannerghattaPS launch manhunt @bngdistpol pic.twitter.com/zm84epqdXj
— Manju Shettar (@ManjuShettar) February 2, 2026
In a daring daylight robbery near Bannerghatta, a gang of four miscreants looted ₹31.38 lakh from a cash collection agent. Kailas, who worked as a cash collection agent for a private firm, had collected money from various branches and was carrying it in his scooter’s storage box. Around 4:20 PM, four unidentified men on two bikes intercepted him, threatened him with a machete, and fled with his scooter.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am