ಬ್ರೇಕಿಂಗ್ ನ್ಯೂಸ್
06-02-26 12:30 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 06 : ಖಾಸಗಿ ಬಸ್ವೊಂದು ಅಪಘಾತಕ್ಕೀಡಾಗಿ, ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ತುಮಕೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗಿನ ಜಾವ 02.40 ಗಂಟೆ ಸುಮಾರಿಗೆ ಸಂಭವಿಸಿದೆ. ಬೆಂಗಳೂರಿನಿಂದ ಯಾದಗಿರಿ ತೆರಳುತ್ತಿದ್ದ ಸಂಜನಾ ಟ್ರಾವೆಲ್ಸ್‌ನ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬೆಂಕಿಗೆ ಆಹುತಿಯಾಗಿದೆ.
ರಸ್ತೆಯಲ್ಲಿ ಕಾಮಗಾರಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ, ನಿಧಾನವಾಗಿ ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡ್ರ್ ಗೆ ಡಿಕ್ಕಿಯಾಗಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ, ಪ್ರಯಾಣಿಕರನ್ನು ತಕ್ಷಣ ಬಸ್‌ನಿಂದ ಕೆಳಗಿಳಿಸಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ನಾಶವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸ್ಥಳಕ್ಕೆ ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಪರಿಣಾಮ ಲಗೇಜ್ ಬಾಕ್ಸ್ನಲ್ಲಿದ್ದ ಪ್ರಯಾಣಿಕರ ವಸ್ತುಗಳೂ ಸುಟ್ಟು ಕರಕಲಾಗಿವೆ.
A major tragedy was averted after a private sleeper bus caught fire on National Highway 48 (Tumakuru–Bengaluru stretch) in the early hours of Thursday around 2:40 AM. The incident occurred near Hanumanthapura Gate in Nelamangala taluk.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm