ಬ್ರೇಕಿಂಗ್ ನ್ಯೂಸ್
07-02-26 05:09 pm HK News Desk ಕರ್ನಾಟಕ
ಗದಗ, ಫೆ.7: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧಗೊಳ್ಳುತ್ತಿರುವ ವಿದ್ಯಾರ್ಥಿಗಳ ಓದಿಗೆ ಅನುವಾಗುವಂತೆ ಗದಗ ಜಿಲ್ಲೆಯ ರೋಣ ಮತ್ತು ಗಜೇಂದ್ರಗಡ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಮೊಬೈಲ್ ಫೋನ್ ಮತ್ತು ಟಿವಿಗಳನ್ನು ಸ್ವಿಚ್ ಆಫ್ ಮಾಡುವಂತೆ ಹಾಗೂ ಟ್ರ್ಯಾಕ್ಟರ್ಗಳಲ್ಲಿ ಜೋರಾಗಿ ಸಂಗೀತ ಹಾಕಿಕೊಂಡು ಸಂಚರಿಸುವುದನ್ನು ನಿಷೇಧಿಸಿ ತಾಲೂಕು ಪಂಚಾಯಿತಿ ಆದೇಶ ಹೊರಡಿಸಿದೆ. ಈ ಕುರಿತು ಡಂಗುರ ಸಾರುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಂತ ಅಧ್ಯಯನ ವಾತಾವರಣ ಒದಗಿಸಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಸುಧಾರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ರೋಣ ಹಾಗೂ ಗಜೇಂದ್ರಗಡ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ತಕ್ಷಣವೇ ಡಂಗೂರ ಸಾರಿಸಿ ಆದೇಶವನ್ನು ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ ಸಮಯದಲ್ಲಿ ಮೊಬೈಲ್ ಬಳಕೆ, ಟಿವಿ ವೀಕ್ಷಣೆ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಓದಿಗೆ ಅಡ್ಡಿಯಾಗುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡುವಂತೆ ತಾಲೂಕು ಪಂಚಾಯಿತಿ ಮನವಿ ಮಾಡಿದೆ.
ಈ ಕ್ರಮಕ್ಕೆ ಗ್ರಾಮಸ್ಥರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. “ಇಂದಿನ ಮಕ್ಕಳಿಗೆ ಓದಲು ಸಮಯ ನೀಡುವುದು ಅತ್ಯಂತ ಮುಖ್ಯ. ಸಂಜೆ ವೇಳೆ ಟಿವಿ, ಮೊಬೈಲ್ ಹಾಗೂ ಜೋರಾದ ಸಂಗೀತದಿಂದ ಮಕ್ಕಳ ಗಮನ ಬೇರೆಡೆ ಹರಿಯುತ್ತಿತ್ತು. ಸರ್ಕಾರ ಹಾಗೂ ತಾಲೂಕು ಪಂಚಾಯಿತಿ ತೆಗೆದುಕೊಂಡಿರುವ ಈ ನಿರ್ಧಾರ ಅತ್ಯಂತ ಉತ್ತಮ. ನಾವು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುತ್ತೇವೆ” ಎಂದು ಗ್ರಾಮಸ್ಥ ಶಿವಾನಂದ ಹೇಳಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm