ಬ್ರೇಕಿಂಗ್ ನ್ಯೂಸ್
09-02-26 07:20 pm Bangalore Correspondent ಕರ್ನಾಟಕ
ಬೆಂಗಳೂರು, ಫೆಬ್ರವರಿ 9 : ವಿದ್ಯಾಭ್ಯಾಸಕ್ಕಾಗಿ ಪೋಷಕರು ಒದಗಿಸಿದ್ದ ಮೊಬೈಲ್ನ್ನು ದುರುಪಯೋಗಪಡಿಸಿಕೊಂಡು, ಸ್ವಂತ ತಾಯಿ ಹಾಗೂ ದೊಡ್ಡಮ್ಮನವರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ ಆರೋಪದ ಮೇರೆಗೆ ಯುವತಿಯೊಬ್ಬಳು ಮತ್ತು ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಬೈಟರಾಯನಪುರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ 49 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಆರೋಪಿಗಳ ವಿರುದ್ಧ ತನಿಖೆ ಆರಂಭಿಸಲಾಗಿದೆ.
23 ವರ್ಷದ ಯುವತಿಯೊಬ್ಬಳು ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಪೋಷಕರಿಂದ ಮೊಬೈಲ್ ಪಡೆದುಕೊಂಡಿದ್ದಳು. ಕೆಲ ದಿನಗಳ ಹಿಂದೆ ಆಕೆ ಅಪರಿಚಿತ ಯುವಕನೊಂದಿಗೆ ನಿರಂತರವಾಗಿ ಮೊಬೈಲ್ನಲ್ಲಿ ಮಾತನಾಡುತ್ತಿರುವುದು ತಾಯಿಯ ಗಮನಕ್ಕೆ ಬಂದಿತ್ತು. ವಿಚಾರಿಸಿದಾಗ ಯುವತಿ ಮೊಬೈಲ್ ನೀಡಲು ನಿರಾಕರಿಸಿದ್ದಲ್ಲದೆ, ಪಾಸ್ವರ್ಡ್ ಕೂಡ ಹಂಚಿಕೊಳ್ಳಲು ಸಿದ್ಧವಾಗಿರಲಿಲ್ಲ.
ಇತ್ತೀಚೆಗೆ ಮಗಳ ನಡವಳಿಕೆಯಲ್ಲಿ ಅಸಾಮಾನ್ಯ ಬದಲಾವಣೆ ಕಂಡುಬಂದ ಹಿನ್ನೆಲೆಯಲ್ಲಿ, ತಂದೆಯ ಸಹಾಯದಿಂದ ತಾಯಿ ಮೊಬೈಲ್ ಮತ್ತು ಪಾಸ್ವರ್ಡ್ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಳವಳಕಾರಿ ಅಂಶಗಳು ಬೆಳಕಿಗೆ ಬಂದಿವೆ.
ಯುವತಿಯು ತನ್ನ ತಾಯಿ ಹಾಗೂ ದೊಡ್ಡಮ್ಮ ನಿದ್ರೆಯಲ್ಲಿದ್ದ ವೇಳೆ ಅವರ ಖಾಸಗಿ ಫೋಟೋಗಳನ್ನು ರಹಸ್ಯವಾಗಿ ತೆಗೆದು, ಅವುಗಳನ್ನು ತನ್ನ ಪ್ರಿಯಕರ ವರುಣ್ ಅಲಿಯಾಸ್ ಗಿರಿಧರ್ಗೆ ಕಳುಹಿಸಿದ್ದಾಳೆ. ಅಲ್ಲದೆ, ದೊಡ್ಡಮ್ಮ ಸ್ನಾನ ಮಾಡುತ್ತಿದ್ದಾಗ ಅವರಿಗೆ ತಿಳಿಯದಂತೆ ನಗ್ನ ಚಿತ್ರಗಳನ್ನು ತೆಗೆದು ರವಾನಿಸಿದ್ದಾಳೆ ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಪ್ರಶ್ನಿಸಿದಾಗ, ಯುವತಿ ತಾನು ಪ್ರೀತಿಸುತ್ತಿರುವ ಯುವಕನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ ಎಂದು ದೂರುದಾರರು ತಿಳಿಸಿದ್ದಾರೆ.
ವಿಷಯ ತಿಳಿದ ಬಳಿಕ ತಾಯಿ ಮಗಳಿಗೆ ಬುದ್ಧಿವಾದ ಹೇಳಿ, ಫೋಟೋಗಳನ್ನು ಡಿಲೀಟ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಭವಿಷ್ಯದಲ್ಲಿ ಈ ಚಿತ್ರಗಳು ದುರುಪಯೋಗವಾಗುವ ಆತಂಕದಿಂದ ಹಾಗೂ ಕುಟುಂಬದ ಗೌರವಕ್ಕೆ ಧಕ್ಕೆ ಉಂಟಾಗಿರುವ ಹಿನ್ನೆಲೆಯಲ್ಲಿ, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಸದ್ಯ ಯುವತಿ ಹಾಗೂ ಆಕೆಯ ಪ್ರಿಯಕರನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರೆಸಿದ್ದಾರೆ. ಈ ಘಟನೆ ಯುವ ಪೀಳಿಗೆಯಲ್ಲಿ ಮೊಬೈಲ್ ಬಳಕೆಯ ಜವಾಬ್ದಾರಿ ಹಾಗೂ ಡಿಜಿಟಲ್ ಅರಿವಿನ ಅಗತ್ಯತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.
A 23-year-old woman and her boyfriend have been booked by Byatarayanapura Police in Bengaluru for allegedly taking private photos of her mother and aunt without consent and sharing them. The complaint was filed by the 49-year-old mother after discovering the images on her daughter’s phone.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am