ಬ್ರೇಕಿಂಗ್ ನ್ಯೂಸ್
15-02-26 10:22 am HK News Staffer ಕರ್ನಾಟಕ
ಬೆಂಗಳೂರು, ಫೆ 15: ಹೊಸಕೋಟೆ ಬಳಿ ನಡೆದ ಡೆಡ್ಲಿ ಆಕ್ಸಿಡೆಂಟ್ ನಲ್ಲಿ ಏಳು ಮಂದಿ ದಾರುಣ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲದ ಜಿಂದಾಲ್ ಫ್ಲೈ ಓವರ್ ಬಳಿ ಭೀಕರ ಕಾರು ಅಪಘಾತ ಸಂಭವಿದ್ದು, ಐವರು ಯುವಕರು ಸಾವನ್ನಪ್ಪಿದ್ದಾರೆ. ಸಿನಿಮೀಯ ಸ್ಟೈನಲ್ಲಿ ಕಾರು ಪಲ್ಟಿಯಾಗಿ 45 ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ
ತುಮಕೂರಿನಿಂದ ಬೆಂಗಳೂರಿನತ್ತ ಪ್ರಯಾಣ ಮಾಡ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಜಿಂದಾಲ್ ಬಳಿಯ ಫ್ಲೈ ಓವರ್ ಮೇಲೆ ರಾತ್ರಿ 11.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.ಈ ವೇಳೆ ಜಿಂದಾಲ್ ಬಳಿಯ ಪ್ಲೈ ಓವರ್ ಮೇಲೆ ಬರ್ತಿದ್ದಂತೆ ಕಾರು ನಿಯಂತ್ರಣ ಕಳೆದುಕೊಂಡು ಮೊದಲು ಬಲಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಸಿನಿಮೀಯ ಸ್ಟೈಲ್ನಲ್ಲಿ ಎರಡು ಪಲ್ಟಿ ಹೊಡೆದು KSRTC ಬಸ್ಗೂ ಡಿಕ್ಕಿ ಹೊಡೆದಿದೆ.


ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡಿದ್ದು, ಬಸ್ ಮುಂಭಾಗ ಡ್ಯಾಮೇಜ್ ಆಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 42 ಮಂದಿ ಪ್ರಯಾಣಿಕರಿಗೆ, ಯಾವುದೇ ಅಪಾಯವಾಗಿಲ್ಲ. ಆದ್ರೆ ಕಾರಿನಲ್ಲಿದ್ದ ಐದು ಮಂದಿಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರ ಪೈಕಿ ಇಬ್ಬರನ್ನು ದೊಡ್ಡಬಳ್ಳಾಪುರದ ಹರ್ಷಿತ್ ಮತ್ತು ಲಿಖಿತ್ ಎಂದು ಗುರುತಿಸಲಾಗಿದ್ದು, ಇನ್ನುಳಿದ ಮೂವರ ಗುರುತು ಪತ್ತೆಯಾಗಿಲ್ಲ ಎಂದ ಪೊಲೀಸರು ತಿಳಿಸಿದ್ದಾರೆ. ಮೃತ ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಪದವಿ ವ್ಯಾಸಾಂಗ ಮಾಡುತ್ತಿದ್ದ ಓದುತ್ತಿದ್ದ ಎಂಬುದು ತಿಳಿದುಬಂದಿದೆ.
ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಮುಂಭಾಗ ಮೃತ ಹರ್ಷಿತ್ನ ತಾಯಿ ಆಕ್ರಂದನ ಮುಗಿಲು ಮುಟ್ಟಿದ್ದು, ಹೆತ್ತ ಮಗನನ್ನು ಕಳೆದುಕೊಂಡ ತಾಯಿಯ ದು:ಖ ನೆರೆದವರ ಕಣ್ಣುಗಳನ್ನೂ ಒದ್ದೆ ಮಾಡಿದೆ. ಹರ್ಷಿತ್ ನಿನ್ನೆ (ಫೆ.14-ಶನಿವಾರ) ರಾತ್ರಿ 8-30ಗೆ ಗೆಳೆಯರನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಬಂದಿದ್ದ. ಆದರೆ ವಿಧಿಯ ಆಟಕ್ಕೆ ಬಲಿಯಾಗಿರುವುದು ನಿಜಕ್ಕೂ ದುರಂತವೇ ಸರಿ.
ಎಲ್ಲಾ ಐವರೂ ಯುವಕರು ಸ್ನೇಹಿತರು ಎನ್ನಲಾಗಿದ್ದು, ರಾತ್ರಿ ಲಾಂಗ್ ಡ್ರೈವ್ಗಾಗಿ ಇಂಡಿಕಾ ಕಾರು ಏರಿದ್ದರು. ಇದರಲ್ಲಿ ಬಹುತೇಕರು ತಮ್ಮ ಮನೆಯಲ್ಲಿ ತಿಳಿಸದೆಯೇ ಜಾಲಿ ರೈಡ್ಗೆ ಬಂದಿದ್ದು, ದಾರುಣವಾಗಿ ಅಂತ್ಯಗೊಂಡಿದ್ದಾರೆ. ಅಪಘಾತದ ಬಳಿಕವೂ ಚಾಲಕ ಲಿಖಿತ್ ಜೀವಂತವಾಗಿದ್ದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾನೆ.
Even before the shock of the recent Hoskote tragedy could fade, another deadly road accident has claimed five young lives on the outskirts of Bengaluru. The accident occurred around midnight near the Navayuga Toll close to the Jindal Hospital flyover in Nelamangala. A Tata Indica car reportedly jumped the road divider and rammed head-on into a Karnataka State Road Transport Corporation
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am