ಬ್ರೇಕಿಂಗ್ ನ್ಯೂಸ್
17-02-26 10:33 pm HK News Desk ಕರ್ನಾಟಕ
ಬೆಂಗಳೂರು, ಫೆ 17: ಊಟಕ್ಕೆ ಹೋಗಲು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಯುವತಿಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಮೃತಪಟ್ಟ ಘಟನೆ ನಗರದ ರಾಜ್ ಕುಮಾರ್ ರಸ್ತೆಯ ಹೆಚ್ಡಿಎಫ್ಸಿ ಬ್ಯಾಂಕ್ ಬಳಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
27 ವರ್ಷದ ಯೋಗೇಶ್ವರಿ ಮೃತ ಯುವತಿ. ಮೃತ ಯೋಗೇಶ್ವರಿ ಕೆಂಪೇಗೌಡ ಲೇಔಟ್ ನಿವಾಸಿಯಾಗಿದ್ದು, ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಊಟಕ್ಕೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇತ್ತ ಯುವತಿ ಕೂಡ ವೇಗವಾಗಿ ಬಂದು ರಸ್ತೆ ದಾಟಲು ಮುಂದಾಗಿದ್ದಾಳೆ. ಅತ್ತ ಬೈಕ್ ಸವಾರ ಕೂಡ ಸಾಕಷ್ಟು ವೇಗವಾಗಿ ಬರುತ್ತಿದ್ದು ಸ್ಪೀಡ್ ಹೆಚ್ಚಾಗಿದ್ದರಿಂದ ಯುವತಿ ಹಾಗೂ ಬೈಕ್ ಸವಾರ ಇಬ್ಬರು ರಸ್ತೆ ಮೇಲೆ ಹಾರಿ ಬಿದ್ದಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆತ ತಕ್ಷಣವೇ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಆಂಬ್ಯುಲೆನ್ಸ್ ಕರೆಸಿ ಯುವತಿಯನ್ನು ಸುಗುಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ರಾಜಾಜಿನಗರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿರುವುದು ದೃಢಪಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೈಕ್ ಸವಾರನ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳನ್ನು ವಶಪಡಿಸಿಕೊಂಡು ಸವಾರನ ಗುರುತು ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.
ಈ ದುರ್ಘಟನೆಯಿಂದ ಯೋಗೇಶ್ವರಿ ಕುಟುಂಬ ಆಘಾತಕ್ಕೊಳಗಾಗಿದ್ದು, ರಸ್ತೆಗಳಲ್ಲಿ ವೇಗ ನಿಯಂತ್ರಣ ಹಾಗೂ ಕಾಲ್ನಡಿಗರ ಸುರಕ್ಷತೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಘಟನೆಯು ನಗರದಲ್ಲಿ ಕಾಲ್ನಡಿಗರ ಭದ್ರತೆ ಕುರಿತು ಮತ್ತೆ ಆತಂಕ ಮೂಡಿಸಿದೆ. ಪ್ರಮುಖ ರಸ್ತೆಗಳಲ್ಲಿ ವಾಹನ ಸವಾರರು ವೇಗ ನಿಯಂತ್ರಣ ಪಾಲಿಸಬೇಕು ಹಾಗೂ ರಸ್ತೆ ದಾಟುವವರು ಎಚ್ಚರಿಕೆಯಿಂದ ಸಂಚರಿಸಬೇಕು ಎಂಬ ಎಚ್ಚರಿಕೆ ಮತ್ತೆ ಮೆರೆಯುತ್ತಿದೆ. ಪೊಲೀಸರು ತನಿಖೆ ಮುಂದುವರಿಸಿರುವುದಾಗಿ ತಿಳಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm