ಬ್ರೇಕಿಂಗ್ ನ್ಯೂಸ್
01-03-26 04:51 pm HK News Desk ಕರ್ನಾಟಕ
ಶಿವಮೊಗ್ಗ, ಮಾರ್ಚ್ 1: ಅಮೇರಿಕಾದವರು ಖಮೇನಿ ಮೇಲೆ ಮಾಡಿರುವ ಯುದ್ದ ಅನಾವಶ್ಯಕವಾದ್ದು. ಇದು ತದ್ವಿರುದ್ದವಾದ ನೀತಿಯಾಗಿದೆ, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ನಾಯಕ ಖಮೇನಿ ಹತ್ಯೆ ಖಂಡನೀಯವಾದುದು. ನಾನು ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ನಮ್ಮ ಸಿಎಸ್ ಜೊತೆ ಮಾತನಾಡಿದ್ದೇನೆ. ಕೇಂದ್ರದವರ ಜೊತೆ ಮಾತನಾಡುತ್ತಿದ್ದಾರೆ. ಕೇಂದ್ರ ವಿದೇಶಾಂಗ ಇಲಾಖೆ ಜೊತೆಗೆ ಚರ್ಚಿಸಿ ದುಬೈನಲ್ಲಿರುವ ರಾಜ್ಯದ ಜನರ ಸುರಕ್ಷತೆಗೆ ಕ್ರಮ ತೆಗೆದುಕೊಳ್ಳಲಾಗುವುದು. ದುಬೈ ಪ್ರವಾಸದಲ್ಲಿರುವ ಭೋಜೆಗೌಡರ ಜೊತೆ ಮಾತನಾಡಿದ್ದೇನೆ. ಅಲ್ಲಿ ವಿಮಾನ ನಿಲ್ದಾಣ ಓಪನ್ ಆದ ನಂತರ ಕರೆ ಎಲ್ಲರನ್ನೂ ಕರೆತರಲಾಗುವುದು. 30 ಜನರ ಜೊತೆ ನಾವು ಸಂಪರ್ಕದಲ್ಲಿದ್ದೇವೆ. ಅವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ ಎಂದು ವಿಪಕ್ಷದವರು ಆರೋಪ ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿವೆ. ಪಕ್ಕದಲ್ಲಿಯೇ ನಿಂತಿದ್ದ ಬಿಜೆಪಿ ಶಾಸಕ ಚನ್ನಬಸಪ್ಪ ಭುಜ ತಟ್ಟಿ ಸಿದ್ಧರಾಮಯ್ಯ ತಮಾಷೆಯ ನಗು ಬೀರುತ್ತಾ ವಿಪಕ್ಷದವರು ಇಲ್ಲೇ ಇದ್ದಾರೆ. ಇವರೇ ಸುಮ್ಮನೆ ಆರೋಪ ಮಾಡುತ್ತಿರುವುದು ಎಂದರು.
ದುಬೈನಲ್ಲಿರುವ ಎಲ್ಲ ಭಾರತೀಯರು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ, ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ವಿದ್ಯುತ್ ದರ ಹೆಚ್ಚಳ ಪ್ರಸ್ತಾಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳ ಇಲ್ಲ ಎಂದರು. ಬಜೆಟ್ ಬಗ್ಗೆ ಕೇಳಿದ್ದಕ್ಕೆ, ಬಜೆಟ್ ಬಂದ ಮೇಲೆಯೇ ನೋಡಿ ಎಂದು ಹೇಳಿ ಆ ಕುರಿತು ಮಾತನಾಡಲು ನಿರಾಕರಿಸಿದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm