ಬ್ರೇಕಿಂಗ್ ನ್ಯೂಸ್
05-03-26 09:40 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 5 : ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಸಂಘರ್ಷಗಳಿಗೆ "ತ್ವರಿತ ಅಂತ್ಯ" ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಸಂಘರ್ಷದ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.
"ಭಾರತ ಮತ್ತು ಫಿನ್ ಲ್ಯಾಂಡ್ ಎರಡೂ ರಾಷ್ಟ್ರಗಳು ಕಾನೂನು, ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಯಾವುದೇ ಸಮಸ್ಯೆಯನ್ನು ಮಿಲಿಟರಿ ಸಂಘರ್ಷದಿಂದ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ನಾವು ಒಪ್ಪುತ್ತೇವೆ" ಎಂದು ಅವರು ಹೇಳಿದರು.
"ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳು ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುವುದನ್ನು ನಾವು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತ-ಫಿನ್ಲ್ಯಾಂಡ್ ಸಂಬಂಧವನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆ ಕ್ಷೇತ್ರದಲ್ಲಿ ವ್ಯೂಹಾತ್ಮಕ ಪಾಲುದಾರಿಕೆಗೆ ಏರಿಸಲು ಉಭಯ ನಾಯಕರು ಒಪ್ಪಂದ ಮಾಡಿಕೊಂಡರು. "AI ನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್ ವರೆಗಿನ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ" ಎಂದು ಅವರು ಹೇಳಿದರು.
ಭಾರತ ಮತ್ತು ಯುರೋಪಿಯನ್ ಯೂನಿಯನ್(ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ಇದೇ ವೇಳೆ ಹೇಳಿದರು. "ಈ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm