ಬ್ರೇಕಿಂಗ್ ನ್ಯೂಸ್
06-03-26 10:21 am HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 5: ಸಿಎಂ ಸಿದ್ದರಾಮಯ್ಯ ಇಂದು 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದು, ಇದು ಅವರ ರಾಜಕೀಯ ಜೀವನದ ದಾಖಲೆಯ 17ನೇ ಬಜೆಟ್ ಆಗಿದೆ. ಇದರೊಂದಿಗೆ ಕರ್ನಾಟಕದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಸಿದ್ದರಾಮಯ್ಯ ನಿರ್ಮಿಸಲಿದ್ದಾರೆ.
ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ ಈ ಬಜೆಟ್ ಮೇಲೆ ವಿವಿಧ ಕ್ಷೇತ್ರಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡಿವೆ. ವಿಶೇಷವಾಗಿ ದುಡಿಯುವ ವರ್ಗಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬಹುದೆಂಬ ನಿರೀಕ್ಷೆ ಹೆಚ್ಚಾಗಿದೆ.
ಬಜೆಟ್ ಪೂರ್ವ ಸಿದ್ಧತೆ ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ವಲಯಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿದ್ದರು. ಹೀಗಾಗಿ ಹೋಟೆಲ್ ಉದ್ಯಮ, ಟ್ಯಾಕ್ಸಿ ಮತ್ತು ಆಟೋ ಚಾಲಕರು, ಸಾರಿಗೆ ನೌಕರರು, ಬೀದಿ ವ್ಯಾಪಾರಿಗಳು ಹಾಗೂ ಕೈಗಾರಿಕಾ ವಲಯ ಸೇರಿದಂತೆ ಹಲವು ಕ್ಷೇತ್ರಗಳ ಕಣ್ಣು ಇಂದಿನ ಬಜೆಟ್ ಮೇಲೆ ನೆಟ್ಟಿದೆ. ಹೋಟೆಲ್ ಉದ್ಯಮವು ರಾಜ್ಯದಲ್ಲಿ 24 ಗಂಟೆ ಹೋಟೆಲ್ ವ್ಯಾಪಾರಕ್ಕೆ ಅವಕಾಶ ನೀಡುವ ಜೊತೆಗೆ ಲೈಸನ್ಸ್ ಮತ್ತು ತೆರಿಗೆ ನಿಯಮಗಳಲ್ಲಿ ಸಡಿಲಿಕೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು ಹೆದ್ದಾರಿಗಳಲ್ಲಿ ಪ್ರತಿ 100 ಕಿಲೋಮೀಟರ್‌ಗಳಿಗೆ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸುವುದು ಹಾಗೂ ರಸ್ತೆ ಸುರಕ್ಷತೆ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆಟೋ ಚಾಲಕರ ಸಂಘಟನೆಗಳು ಬೈಕ್ ಟ್ಯಾಕ್ಸಿ ಸೇವೆಗೆ ನಿಷೇಧ, ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ, ಜಾತಿವಾರು ನಿಗಮಗಳ ಮೂಲಕ ಸಾಲ ಸೌಲಭ್ಯ, ಇವಿ ಆಟೋ ಖರೀದಿಗೆ ಶೇಕಡಾ 50 ಸಹಾಯಧನ ಹಾಗೂ ವಸತಿ ಯೋಜನೆಗಳಡಿ ಚಾಲಕರಿಗೆ ಪ್ರತ್ಯೇಕ ಕಾಲೋನಿಗಳ ನಿರ್ಮಾಣಕ್ಕೆ ಮನವಿ ಸಲ್ಲಿಸಿವೆ. ಇದೇ ವೇಳೆ ಸಾರಿಗೆ ನೌಕರರು 36 ತಿಂಗಳ ಬಾಕಿ ಇರುವ ಅರಿಯರ್ಸ್ ಪಾವತಿ ಹಾಗೂ 2024ರಿಂದ ವೇತನ ಹೆಚ್ಚಳ ಕುರಿತು ಸ್ಪಷ್ಟ ನಿರ್ಧಾರ ನಿರೀಕ್ಷಿಸುತ್ತಿದ್ದಾರೆ.
ಇದರ ಜೊತೆಗೆ ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಹಲವು ಪ್ರಮುಖ ವಲಯಗಳೂ ಈ ಬಜೆಟ್‌ನತ್ತ ದೊಡ್ಡ ನಿರೀಕ್ಷೆ ಇಟ್ಟುಕೊಂಡಿವೆ. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸುಮಾರು 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಘೋಷಣೆ ಬರುವ ಸಾಧ್ಯತೆ ಇದೆ. ಜೊತೆಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸುವಂತೆ ಸರ್ಕಾರಿ ನೌಕರರು ಒತ್ತಾಯಿಸಿದ್ದಾರೆ. ಅತಿಥಿ ಶಿಕ್ಷಕರು, ಉಪನ್ಯಾಸಕರು ಮತ್ತು ಬಿಸಿಯೂಟ ಸಿಬ್ಬಂದಿಗೆ ಗೌರವಧನ ಹೆಚ್ಚಳ ಮಾಡುವ ನಿರೀಕ್ಷೆಯೂ ಇದೆ.
ಕೃಷಿ ವಲಯದಲ್ಲಿ ಯುವಕರನ್ನು ಕೃಷಿಯತ್ತ ಸೆಳೆಯಲು ಸಹಾಯಧನ, ಶೂನ್ಯ ಬಡ್ಡಿ ಸಾಲ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಬೆಳೆಗಳಿಗೆ ಬೆಂಬಲ ಬೆಲೆ, ವಿಮೆ ಹಾಗೂ ಹನಿ ನೀರಾವರಿಗೆ ಉತ್ತೇಜನ ನೀಡುವ ಕ್ರಮಗಳ ನಿರೀಕ್ಷೆಯಿದೆ. ರೈತರು ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವಾಗ ಟೋಲ್ ಶುಲ್ಕದಿಂದ ವಿನಾಯಿತಿ ನೀಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ನಕಲಿ ಕೀಟನಾಶಕ ಮತ್ತು ಗೊಬ್ಬರ ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬೇಡಿಕೆಯೂ ಇದೆ.
ಹಿಂದುಳಿದ ವರ್ಗಗಳ ಸಂಘಟನೆಗಳು ಅಭಿವೃದ್ಧಿಗೆ ಕನಿಷ್ಠ 10 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕು ಮತ್ತು ಮೀಸಲಾತಿಯನ್ನು ಶೇಕಡಾ 50ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿವೆ. ಪ್ರವರ್ಗ-1 ಮತ್ತು 2ಎ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ಭರವಸೆ ನೀಡುವ ಜೊತೆಗೆ ವಿವಿಧ ನಿಗಮಗಳಿಗೆ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆಯಿದೆ.
ಕೈಗಾರಿಕಾ ವಲಯವು ಕೇವಲ ಬೆಂಗಳೂರಿಗೆ ಸೀಮಿತವಾಗಿರುವ ಕೈಗಾರಿಕೆಗಳನ್ನು ರಾಜ್ಯದ ದ್ವಿತೀಯ ಮತ್ತು ತೃತೀಯ ಹಂತದ ನಗರಗಳಿಗೆ ವಿಸ್ತರಿಸಲು ಉತ್ತೇಜನ ನೀಡುವ ಘೋಷಣೆಗಳನ್ನು ನಿರೀಕ್ಷಿಸುತ್ತಿದೆ. ಎಂಎಸ್‌ಎಂಇಗಳಿಗೆ ವಿಶೇಷ ನೀತಿ, ಕೈಗಾರಿಕಾ ಟೌನ್‌ಶಿಪ್‌ಗಳ ಸ್ಥಾಪನೆ, ಹಸಿರು ಇಂಧನ, ಕೌಶಲ್ಯಾಭಿವೃದ್ಧಿ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಸಾಧ್ಯತೆಯಿದೆ.
ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಘೋಷಣೆಗಳ ನಿರೀಕ್ಷೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಹೆಚ್ಚಳ, ಆಧುನಿಕ ವೈದ್ಯಕೀಯ ಉಪಕರಣಗಳ ವ್ಯವಸ್ಥೆ, ಹೊಸ ಐಸಿಯು ಹಾಗೂ ಡಯಾಲಿಸಿಸ್ ಘಟಕಗಳ ಸ್ಥಾಪನೆ, ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ನೀಡುವ ಸಾಧ್ಯತೆ ಇದೆ. ಜೊತೆಗೆ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಹಾಗೂ ಆರೋಗ್ಯ ಸೇವೆಗಳ ಡಿಜಿಟಲೀಕರಣಕ್ಕೂ ಒತ್ತು ನೀಡಲಾಗಬಹುದು.
ಒಟ್ಟಾರೆ, ರಾಜ್ಯದ ವಿವಿಧ ವಲಯಗಳ ನಿರೀಕ್ಷೆಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಈ ಬಜೆಟ್ ರಾಜ್ಯದ ಆರ್ಥಿಕ ದಿಕ್ಕು ಹಾಗೂ ಜನಸಾಮಾನ್ಯರ ಬದುಕಿನ ಮೇಲೆ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದ್ದು, ಸರ್ಕಾರ ಈ ನಿರೀಕ್ಷೆಗಳಿಗೆ ಯಾವ ಮಟ್ಟಿಗೆ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm