ಬ್ರೇಕಿಂಗ್ ನ್ಯೂಸ್
08-03-26 04:47 pm HK News Staffer ಕರ್ನಾಟಕ
ಖಾಂಡ್ವಾ, ಮಾರ್ಚ್ 08: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಅಮಾನುಷ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆ ಆರಂಭಿಸಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಜಿಲ್ಲೆಯ ಕೇಂದ್ರದಿಂದ ಸುಮಾರು 55 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಯೊಂದರ ಕೃಷಿ ಹೊಲದಲ್ಲಿ ಗುರುವಾರ ಸಂಜೆ ವೇಳೆ ವೃದ್ಧೆ ಒಬ್ಬಂಟಿಯಾಗಿದ್ದಾಗ ನಾಲ್ವರು ಮುಸುಕುಧಾರಿಗಳು ಆಕೆಯ ಮೇಲೆ ದಾಳಿ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಿಂದ ಗಾಯಗೊಂಡಿದ್ದ ಸಂತ್ರಸ್ತೆ ಮರುದಿನ ಬೆಳಿಗ್ಗೆ ಸಮೀಪದ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ಈ ವಿಷಯವನ್ನು ತಿಳಿಸಿದ್ದಾಳೆ. ನಂತರ ಮಗಳು ತಾಯಿಯನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿನ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಹಿಳೆ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಆರೋಪಿಗಳ ಪತ್ತೆಗೆ ನೆರವಾಗುವ ಮಾಹಿತಿಯನ್ನು ನೀಡುವವರಿಗೆ 10,000 ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬದಿ ಬಿಟ್ಟು ಹೋಗಿ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm