ಬ್ರೇಕಿಂಗ್ ನ್ಯೂಸ್
08-03-26 10:17 pm HK News Staffer ಕರ್ನಾಟಕ
ಬೆಳಗಾವಿ, ಮಾರ್ಚ್ 8: ಚಿಕ್ಕೋಡಿ ತಾಲ್ಲೂಕಿನ ಹತ್ತರವಾಟ ಗ್ರಾಮದ ಕಿರಣ್ ಸಣ್ಣಪ್ಪ ಕಮತೆ (29) ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 53ನೇ ರ್ಯಾಂಕ್ ಹಾಗೂ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಮಹತ್ವದ ಸಾಧನೆ ಮೆರೆದಿದ್ದಾರೆ.
ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಪದವಿ ಪಡೆದಿರುವ ಕಿರಣ್ ಕಮತೆ ಅವರು, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಿರಣ್ ಅವರ ತಂದೆ ಡಾ.ಸಣ್ಣಪ್ಪ ಕಮತೆ ಅವರು ನಿಡಸೋಸಿಯ ಹೀರಾ ಶುಗರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದು, ತಾಯಿ ರುಕ್ಮಿಣಿ ಗೃಹಿಣಿಯಾಗಿದ್ದಾರೆ. ಕಿರಣ್ ಅವರ ವಿದ್ಯಾಭ್ಯಾಸದ ಹಾದಿ ವೈವಿಧ್ಯಮಯವಾಗಿದೆ. ಅವರು 1 ಮತ್ತು 2ನೇ ತರಗತಿಯನ್ನು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬೆಜೋಗಾಯಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿದ್ದಾರೆ. ಬಳಿಕ 3ರಿಂದ 8ನೇ ತರಗತಿ ವರೆಗೆ ಹುಬ್ಬಳ್ಳಿಯ ಎಂ.ಆರ್. ಸಾಖರೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದರು. 9 ಮತ್ತು 10ನೇ ತರಗತಿಯನ್ನು ಗದಗದ ಕೆಎಲ್ಇ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ಣಗೊಳಿಸಿ, ನಿಪ್ಪಾಣಿಯ ಜಿ.ಐ. ಬಾಗೇವಾಡಿ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ಓದಿದರು. ನಂತರ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಪದವಿ ಪಡೆದರು. 2023ರಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ನೇಮಕಗೊಂಡಿದ್ದರು.
ಯುಪಿಎಸ್ಸಿ ಸಾಧನೆ ಕುರಿತು ಮಾತನಾಡಿದ ಕಿರಣ್ ಕಮತೆ, “ಇದು ನನ್ನ ಕೊನೆಯ ಅವಕಾಶವಾಗಿತ್ತು. ಕೆಲಸ ಮಾಡುತ್ತಲೇ ದಿನಕ್ಕೆ ಐದರಿಂದ ಆರು ಗಂಟೆಗಳ ಕಾಲ ಓದುತ್ತಿದ್ದೆ. ಏನಾದರೂ ಆಗಲಿ ಈ ಬಾರಿ ಪಾಸ್ ಆಗಲೇಬೇಕು ಎಂಬ ಸಂಕಲ್ಪದಿಂದ ಪರೀಕ್ಷೆ ಬರೆದಿದ್ದೆ. 250 ರ್ಯಾಂಕ್ ಒಳಗೆ ಬರುವ ನಿರೀಕ್ಷೆ ಇತ್ತು. ಆದರೆ 53ನೇ ರ್ಯಾಂಕ್ ಬಂದಿರುವುದು ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ ಸಿಕ್ಕಿರುವುದು ತುಂಬಾ ಸಂತೋಷ ತಂದಿದೆ” ಎಂದು ಹೇಳಿದರು.
“ಬಾಲ್ಯದಲ್ಲೇ ತಂದೆಯವರು ಯುಪಿಎಸ್ಸಿ ಕನಸು ಬಿತ್ತಿದ್ದರು. ಕಳೆದ ಆರು ವರ್ಷಗಳಿಂದ ಸತತ ಪ್ರಯತ್ನ ಮಾಡುತ್ತಿದ್ದೆ. ಈ ಸಾಧನೆಯನ್ನು ತಂದೆ-ತಾಯಿಗೆ ಅರ್ಪಿಸುತ್ತೇನೆ. ಪತ್ನಿ ಲೋಚನಾ ಅವರ ಸಹಕಾರವೂ ಮಹತ್ವದ್ದಾಗಿತ್ತು. ಸಹೋದರಿ, ಸಂಬಂಧಿಕರು, ಸ್ನೇಹಿತರು ಹಾಗೂ ಸಹೋದ್ಯೋಗಿಗಳು ಎಲ್ಲರೂ ಪ್ರೋತ್ಸಾಹ ನೀಡಿದರು. ಅವರಿಗೆಲ್ಲ ಧನ್ಯವಾದಗಳು” ಎಂದು ಕಿರಣ್ ಭಾವುಕರಾಗಿ ಹೇಳಿದರು.
ಕಿರಣ್ ಅವರ ತಂದೆ ಡಾ. ಸಣ್ಣಪ್ಪ ಕಮತೆ ಮಾತನಾಡಿ, “ಶಿಕ್ಷಕರ ಮಕ್ಕಳು ಹಾಗೂ ಸಾಮಾನ್ಯ ಕುಟುಂಬದಿಂದ ಬಂದ ಮಕ್ಕಳು ಸಾಧನೆ ಮಾಡುವುದು ಅತ್ಯಂತ ಹೆಮ್ಮೆಯ ಸಂಗತಿ. ಇದು ಇತರರಿಗೆ ಪ್ರೇರಣೆಯಾಗುತ್ತದೆ. ನಮ್ಮ ಮಗನ ಕಠಿಣ ಪರಿಶ್ರಮಕ್ಕೆ ಇಂದು ಫಲ ಸಿಕ್ಕಿದೆ. ಬಹಳ ಸಂತೋಷವಾಗುತ್ತಿದೆ” ಎಂದು ಹರ್ಷ ವ್ಯಕ್ತಪಡಿಸಿದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm