ಬ್ರೇಕಿಂಗ್ ನ್ಯೂಸ್
09-03-26 03:24 pm HK News Staffer ಕರ್ನಾಟಕ
ಬಳ್ಳಾರಿ, ಮಾರ್ಚ್ 08: ನಗರದ ತಾಳೂರು ರಸ್ತೆಯಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ದಾಳಿ ನಡೆಸಿ ಎಸ್ಕೇಪ್ ಆಗಿದ್ದಾನೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು ಏಳು ಮಂದಿ ಗಾಯಗೊಂಡಿದ್ದಾರೆ. ಕೃತ್ಯ ನಡೆಸಿದ ಅರ್ಧ ಗಂಟೆಯೊಳಗೆ ಬಾಲಕ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದು, ಘಟನೆ ನಡೆದು 30 ಗಂಟೆಗಳಾದರೂ ಇದುವರೆಗೂ ಪತ್ತೆಯಾಗಿಲ್ಲ.
ಕೃತ್ಯ ನಡೆಸಿ ಅರ್ಧ ಗಂಟೆಯಲ್ಲೇ ಶಾಲಾ ಹಾಸ್ಟೆಲ್ ಕಾಂಪೌಂಡ್ ದಾಟಿದ ಬಳಿಕ ಬಾಲಕ ಎಲ್ಲಿಗೆ ಹೋದ ಎಂಬ ಸುಳಿವು ಇದುವರೆಗೂ ಸಿಕ್ಕಿಲ್ಲ. ಆತನಿಗಾಗಿ ಬಳ್ಳಾರಿ ಎಸ್ಪಿ ಡಾ. ಸುಮನ್ ಫನ್ನೇಕರ್ ನೇತೃತ್ವದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ಒಂಬತ್ತನೇ ತರಗತಿ ವಿದ್ಯಾರ್ಥಿ, ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಸಮ್ಮತಗೇರಿ ಗ್ರಾಮದ ಡಿ. ಹೇಮಂತ್ ಮೃತಪಟ್ಟ ಬಾಲಕ. ಗಾಯಗೊಂಡವರ ಪೈಕಿ ಒಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಎಲ್ಲರೂ ಬಳ್ಳಾರಿಯ ವಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳೆಲ್ಲರೂ ವಿವಿಧ ತರಗತಿಗಳಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ.
ದಾಳಿ ಮಾಡಿದ ಬಾಲಕ ಬಳ್ಳಾರಿಯ ಗೋನಾಳು ಗ್ರಾಮದವನಾಗಿದ್ದು ರಾಡ್, ಚಾಕು, ತೆಂಗಿನಕಾಯಿ ಸುಲಿಯುವ ಸಾಧನದಿಂದ ದಾಳಿ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ಶನಿವಾರ ರಾತ್ರಿ ಹಾಸ್ಟೆಲ್ನಲ್ಲಿ ಎಲ್ಲರೂ ಊಟ ಮುಗಿಸಿದ್ದರು. ಮೃತ ಹೇಮಂತ್, ಆರೋಪಿ ಬಾಲಕ ಮತ್ತು ಇತರ ಇಬ್ಬರು ವಿದ್ಯಾರ್ಥಿಗಳು ಒಂದೇ ಕಡೆ ಮಲಗಿದ್ದರು. ರಾತ್ರಿ 10.15ರ ಸುಮಾರಿಗೆ ಆರೋಪಿ ಏಕಾಏಕಿ ದಾಳಿ ನಡೆಸಿದ್ದಾನೆ. ಅಡ್ಡ ಬಂದ ವಾರ್ಡನ್ ಬ್ಲೆಸಿ ಅವರ ಮೇಲೂ ಹಲ್ಲೆ ನಡೆಸಿದ್ದಾನೆ.
ಹಾಸ್ಟೆಲ್ ಒಳಭಾಗದಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾಗಳು ಇಲ್ಲದಿರುವುದರಿಂದ ಘಟನೆ ನಿಖರವಾಗಿ ಹೇಗೆ ನಡೆದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಆರೋಪಿ ಬಾಲಕ ಹಾಸ್ಟೆಲ್ನಿಂದ ಪರಾರಿಯಾಗುತ್ತಿರುವ ದೃಶ್ಯಗಳು ಹೊರಭಾಗದಲ್ಲಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ತನಿಖೆಗೆ ಪ್ರಮುಖ ಸುಳಿವಾಗಿ ಪರಿಣಮಿಸಿದೆ.
ಇದೀಗ ತನಿಖೆ ಮುಂದುವರಿಯುತ್ತಿದ್ದಂತೆ ದಾಳಿ ನಡೆಸಿದ 15 ವರ್ಷದ ಬಾಲಕ ಡ್ರಗ್ಸ್ ವ್ಯಸನಿಯಾಗಿರಬಹುದೆಂಬ ಅನುಮಾನವೂ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿ ಹೇಮಂತ್ನ ತಂದೆ ಲಕ್ಷ್ಮೀಕಾಂತ ಅವರು ವಕೀಲರಾಗಿದ್ದು, ಗಂಭೀರ ಆರೋಪ ಮಾಡಿದ್ದಾರೆ. “ಇಷ್ಟು ಭೀಕರ ದಾಳಿ ನಡೆಸಲು ಬಾಲಕನಿಗೆ ಮಾರಕಾಸ್ತ್ರ ಸಿಕ್ಕಿರುವುದು ಶಾಲಾ ಆಡಳಿತ ಮಂಡಳಿಯ ವೈಫಲ್ಯವನ್ನೇ ತೋರಿಸುತ್ತದೆ. ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆಡಳಿತ ನಿರ್ಲಕ್ಷ್ಯ ವಹಿಸಿದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಶಾಲೆಯ ಆಡಳಿತ ಮತ್ತು ಮಾನ್ಯತೆ ಕುರಿತು ಕೂಡ ಪ್ರಶ್ನೆಗಳು ಉದ್ಭವಿಸಿವೆ. ವಸತಿ ಶಾಲೆಯಲ್ಲಿ ಸಿಬಿಎಸ್ಇ ಪಠ್ಯಕ್ರಮ ಬೋಧಿಸಲಾಗುತ್ತಿದೆ ಎನ್ನಲಾಗಿದ್ದರೂ, ಅದಕ್ಕೆ ಸಂಬಂಧಿಸಿದ ಅನುಮತಿ ಇತ್ತೇ ಎಂಬ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಪ್ರತಿಕ್ರಿಯಿಸಿದ ಡಿಡಿಪಿಐ ಉಮಾದೇವಿ, “ಈ ವಸತಿ ಶಾಲೆಗೆ ಇಲಾಖೆಯಿಂದ ಯಾವುದೇ ಅನುಮತಿ ನೀಡಲಾಗಿಲ್ಲ,” ಎಂದು ತಿಳಿಸಿದ್ದಾರೆ.
ಘಟನೆಯ ಸಮಯದಲ್ಲಿ ಹಾಸ್ಟೆಲ್ನಲ್ಲಿ ಒಟ್ಟು ಒಂಬತ್ತು ವಿದ್ಯಾರ್ಥಿಗಳು ಮಾತ್ರ ಇದ್ದರು ಎಂದು ತಿಳಿದುಬಂದಿದೆ. ಅವರಲ್ಲಿ ಒಬ್ಬ ಬಾಲಕಿಯೂ ಇದ್ದಳು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಯ ನಿರ್ವಹಣೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಗಂಭೀರ ಪ್ರಶ್ನೆಗಳು ಎದುರಾಗಿವೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಪರಾರಿಯಾದ ಆರೋಪಿ ಬಾಲಕನ ಪತ್ತೆಗೆ ಪೊಲೀಸರು ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm