ಬ್ರೇಕಿಂಗ್ ನ್ಯೂಸ್
09-03-26 05:44 pm HK News Staffer ಕರ್ನಾಟಕ
ಮಂಡ್ಯ, ಮಾ.9 : ತಮ್ಮ ಮಗುವನ್ನು ಕೊಲ್ಲಲು ಯತ್ನಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್ (29) ಮತ್ತು ಪತ್ನಿ ದಿವ್ಯಶ್ರೀ (25) ಸಾವನ್ನಪ್ಪಿದವರು.
ಆತ್ಮಹತ್ಯೆಗೂ ಮುನ್ನ ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ದಂಪತಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಎರಡು ವರ್ಷದ ಮಗುವಿತ್ತು. ಕೆ.ಆರ್. ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಆದರೆ, ಅಸ್ವಸ್ಥಗೊಂಡ ಮಗು ಬದುಕುಳಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ದರ್ಶನ್ ಕಾರು ಚಾಲಕನಾಗಿದ್ದರೆ, ದಿವ್ಯ ಪ್ಯಾರಾ ಮೆಡಿಕಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಕಾರು ಚಾಲಕನಾಗಿದ್ದ ದರ್ಶನ್ ಡ್ರೈವಿಂಗ್ ಜೊತೆಗೆ ಕೃಷಿ ಮಾಡುತ್ತಿದ್ದ. ಕೆಆರ್ ಪೇಟೆಯಲ್ಲಿ ವಾಸವಾಗಿದ್ದ ದಂಪತಿ ನಡುವೆ ಇಂದು ಬೆಳಗ್ಗೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗ್ತಿದೆ. ಗಲಾಟೆ ಬಳಿಕ ಮೊದಲು ನೇಣು ಬಿಗಿದುಕೊಂಡು ದಿವ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪತ್ನಿ ಆತ್ಮಹತ್ಯೆ ಬಳಿಕ ಪತಿ ದರ್ಶನ್, ದಿವ್ಯಾ ಕುಟುಂಬಕ್ಕೆ ವಿಡಿಯೋ ಕಾಲ್ ಮಾಡಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣದ ಜಗಳಕ್ಕೆ ಸುಂದರ ಸಂಸಾರ ನುಚ್ಚು ನೂರಾಗಿದೆ. ಪತ್ನಿ ಸಾವಿನ ಬಳಿಕ ಮಗಳನ್ನ ಕೂಡ ಕೊಲೆ ಮಾಡಲು ದರ್ಶನ್ ಮುಂದಾಗಿದ್ದ. ಕತ್ತು ಹಿಸುಕಿದ ವೇಳೆ ಮಗು ಪ್ರಜ್ಞೆ ತಪ್ಪಿದ್ದು, ಸತ್ತಿದೆ ಎಂದು ಬಿಟ್ಟು ಹೋಗಿದ್ದ. ಆದರೆ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಗು ಸತ್ತು ಹೋಯ್ತು ಎಂದು ತಿಳಿದು ದರ್ಶನ್ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm