ಬ್ರೇಕಿಂಗ್ ನ್ಯೂಸ್
09-03-26 08:07 pm HK News Staffer ಕರ್ನಾಟಕ
ಮಡಿಕೇರಿ, ಮಾರ್ಚ್ 9: ಕೊಡಗಿನಲ್ಲಿ 10 ದಿನ ಅಂತರದಲ್ಲಿ ಕಾಡಾನೆ ದಾಳಿಗೆ ಎರಡನೇ ಜೀವ ಬಲಿಯಾಗಿದ್ದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಜಲಜಾಕ್ಷಿ (53) ಕಾಡಾನೆಗೆ ಬಲಿಯಾಗಿದ್ದಾರೆ.
ಇಂದು ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೇವಲ 10 ದಿನ ಅವಧಿಯಲ್ಲಿ ಆನೆ ದಾಳಿಗೆ ಎರಡನೇ ಬಲಿಯಾಗಿದ್ದು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತಾಗಿದೆ. ಮಾನವ- ಪ್ರಾಣಿ ಸಂಘರ್ಷದ ದಾಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಗ್ರಾಮಗಳಲ್ಲಿ ಅಡ್ಡಾಡುತ್ತ ದಾಂಧಲೆ ಮಾಡುತ್ತಿರುವ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಬಲೆ ಬಲೆಬೀಸಿದೆ. ಅರಣ್ಯದ ಅಂಚಿನ ಗ್ರಾಮದಲ್ಲಿ ರಾತ್ರಿ - ಹಗಲು ಎನ್ನದೆ ಕಾಡಾನೆಗಳ ಕಾಟ ಮಿತಿಮೀರಿದೆ. ಹೀಗಾಗಿ ಸಂಜೆ ವೇಳೆ ಇಲ್ಲಿನ ಜನರು, ಕೂಲಿ ಕಾರ್ಮಿಕರು ಹೊರಕ್ಕೆ ಹೋಗಲು ಭಯಪಡುವ ಸ್ಥಿತಿಯಾಗಿದೆ. ಶಾಶ್ವತ ತಡೆಗಟ್ಟಲು ಆರಣ್ಯ ಇಲಾಖೆ ಕ್ರಮ ವಹಿಸಬೇಕು ಎಂದು ಸ್ಥಳೀಯರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm