ಬ್ರೇಕಿಂಗ್ ನ್ಯೂಸ್
10-03-26 01:47 pm HK News Staffer ಕರ್ನಾಟಕ
ಬೆಂಗಳೂರು, ಮಾ.10: ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದ ಪರಿಣಾಮ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಬೆಂಗಳೂರು ನಗರದ ಹಲವಾರು ಹೋಟೆಲ್ಗಳು ಮಂಗಳವಾರದಿಂದ ಬಂದ್ ಆಗುವ ಸಾಧ್ಯತೆ ಎದುರಾಗಿದೆ. ಈ ಬೆಳವಣಿಗೆಯಿಂದ ಆಹಾರ ಸರಬರಾಜಿನಲ್ಲಿ ತೀವ್ರ ಸಮಸ್ಯೆ ಉಂಟಾಗುವ ಆತಂಕ ವ್ಯಕ್ತವಾಗಿದೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯಕ್ಕೆ ವಿರೋಧವಾಗಿ ಬೆಂಗಳೂರು ಹೋಟೆಲ್ಗಳ ಸಂಘವು ನಗರಾದ್ಯಂತ ಹೋಟೆಲ್ಗಳನ್ನು ಬಂದ್ ಮಾಡಲು ತೀರ್ಮಾನಿಸಿದೆ. ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್ ಮಾತನಾಡಿ, “ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ಗಳ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ತೈಲ ಕಂಪನಿಗಳು 70 ದಿನಗಳ ಕಾಲ ನಿರಂತರ ಪೂರೈಕೆಯ ಭರವಸೆ ನೀಡಿದ್ದರೂ, ಏಕಾಏಕಿ ಪೂರೈಕೆ ನಿಲ್ಲಿಸಿರುವುದು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಗ್ಯಾಸ್ ಇಲ್ಲದೆ ಅಡುಗೆ ಮಾಡುವುದು ಅಸಾಧ್ಯವಾಗಿರುವುದರಿಂದ ಹೋಟೆಲ್ಗಳನ್ನು ಮುಚ್ಚುವುದು ಅನಿವಾರ್ಯವಾಗಿದೆ” ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ಲಕ್ಷಾಂತರ ಐಟಿ ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ದಿನಗೂಲಿ ಕಾರ್ಮಿಕರು ತಮ್ಮ ದಿನನಿತ್ಯದ ಊಟಕ್ಕಾಗಿ ಹೋಟೆಲ್ಗಳನ್ನೇ ಅವಲಂಬಿಸುತ್ತಿದ್ದಾರೆ. ಹೋಟೆಲ್ಗಳು ಬಂದ್ ಆದರೆ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆ ಎದುರಾಗಬಹುದು ಎಂದು ಅವರು ಎಚ್ಚರಿಸಿದರು. ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ಸಚಿವರು ತಕ್ಷಣ ಮಧ್ಯಪ್ರವೇಶಿಸಿ ಗ್ಯಾಸ್ ಪೂರೈಕೆಯನ್ನು ಸರಿಪಡಿಸಬೇಕು ಎಂದು ಸಂಘ ಆಗ್ರಹಿಸಿದೆ.
ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಮಾತನಾಡಿ, “ಸದ್ಯ ಮಾರುಕಟ್ಟೆಯಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಸುಮಾರು ₹1800 ಇದೆ. ಆದರೆ ಪೂರೈಕೆ ಕೊರತೆಯಿಂದ ಕಾಳಸಂತೆ ಮಾರುಕಟ್ಟೆಯಲ್ಲಿ ಇದರ ಬೆಲೆ ₹2500ರಿಂದ ₹2800ರವರೆಗೆ ಏರಿಕೆಯಾಗಿದೆ” ಎಂದು ತಿಳಿಸಿದ್ದಾರೆ. ನಗರಕ್ಕೆ ಸಾಮಾನ್ಯವಾಗಿ ಪ್ರತಿದಿನ ಸುಮಾರು 22 ಸಾವಿರ ಕಮರ್ಷಿಯಲ್ ಸಿಲಿಂಡರ್ಗಳು ಪೂರೈಕೆಯಾಗುತ್ತವೆ. ಪ್ರತಿ ಸಿಲಿಂಡರ್ 19 ಕೆ.ಜಿ ತೂಕವಿದ್ದು, ದಿನಕ್ಕೆ ಸುಮಾರು 4.18 ಲಕ್ಷ ಕೆ.ಜಿ ಗ್ಯಾಸ್ ಬಳಕೆಯಾಗುತ್ತದೆ. ಆದರೆ ಪ್ರಸ್ತುತ ಪೂರೈಕೆ ಕಡಿಮೆಯಾಗಿದ್ದು, ದಿನಕ್ಕೆ ಸುಮಾರು 11 ಸಾವಿರ ಸಿಲಿಂಡರ್ಗಳು ಮಾತ್ರ ಲಭ್ಯವಾಗುತ್ತಿವೆ ಎಂದು ತಿಳಿದುಬಂದಿದೆ.
ಈ ನಡುವೆ ಗ್ಯಾಸ್ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯೂ ಇದೆ. ಪ್ರಸ್ತುತ ₹1850 ಇರುವ ಕಮರ್ಷಿಯಲ್ ಸಿಲಿಂಡರ್ ಬೆಲೆ ₹2200ರವರೆಗೆ ಏರಬಹುದು ಎಂಬ ಚರ್ಚೆ ನಡೆಯುತ್ತಿದೆ. ಈ ಕುರಿತು ಪೆಟ್ರೋಲಿಯಂ ಇಲಾಖೆಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಎಲ್ಪಿಜಿ ಸಿಲಿಂಡರ್ಗಳ ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಅದರಂತೆ ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಗೃಹ ಬಳಕೆ ಗ್ರಾಹಕರಿಗೆ ಮೊದಲ ಆದ್ಯತೆ ನೀಡಲು ಸರ್ಕಾರ ತೀರ್ಮಾನಿಸಿದ್ದು, ದೇಶೀಯ ಉತ್ಪಾದನೆ ಹೆಚ್ಚಿಸುವ ಜೊತೆಗೆ ಹೊಸ ರಾಷ್ಟ್ರಗಳಿಂದ ಎಲ್ಪಿಜಿ ಆಮದು ಮಾಡುವ ಕ್ರಮ ಕೈಗೊಳ್ಳಲಾಗುತ್ತಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm