ಬ್ರೇಕಿಂಗ್ ನ್ಯೂಸ್
11-03-26 12:57 pm HK News Staffer ಕರ್ನಾಟಕ
ಗದಗ, ಮಾ 11: ಜಿಲ್ಲೆಯಲ್ಲಿ ಪತ್ತೆಯಾದ ಲಕ್ಕುಂಡಿ ಚಿನ್ನದ ನಿಧಿ ಕುರಿತಾಗಿ ಹಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. 2026ರ ಜನವರಿ 10ರಂದು ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಪತ್ತೆಯಾದ ಈ ಆಭರಣಗಳು ಕೇವಲ ಬಂಗಾರದ ಒಡವೆಗಳಷ್ಟೇ ಅಲ್ಲ, ಐತಿಹಾಸಿಕ ಮಹತ್ವ ಹೊಂದಿರುವ ಅಮೂಲ್ಯ ಚಿನ್ನದ ಆಭರಣಗಳು ಎಂದು ಪುರಾತತ್ವ ತಜ್ಞರು ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ನಡೆದ ಪರಿಶೀಲನೆಯಲ್ಲಿ ತಜ್ಞರ ಸಮಿತಿ ಈ ಆಭರಣಗಳ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಿತ್ತಿ ಕುಟುಂಬಸ್ಥರಿಗೆ ಪತ್ತೆಯಾದ ಚಿನ್ನದ ಆಭರಣಗಳು ಸುಮಾರು 500ರಿಂದ 600 ವರ್ಷಗಳಷ್ಟು ಹಳೆಯ ಆಭರಣಗಳಾಗಿದ್ದು, ಕಲ್ಯಾಣ ಚಾಲುಕ್ಯರು ಮತ್ತು ವಿಜಯನಗರ ಸಾಮ್ರಾಜ್ಯ ಕಾಲದ ಕಲೆ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಒಡವೆಗಳು ಸಾಮಾನ್ಯ ಮಹಿಳೆಯರು ಧರಿಸುವುದಕ್ಕಲ್ಲ; ದೇವಾಲಯಗಳಲ್ಲಿ ಹೆಣ್ಣು ದೇವತೆಗಳಿಗೆ ಅಥವಾ ಉತ್ಸವ ಮೂರ್ತಿಗಳಿಗೆ ಅಲಂಕರಿಸುವ ಅಪರೂಪದ ಆಭರಣಗಳಾಗಿವೆ. ಪರಿಶೀಲನೆಯ ವೇಳೆ ಹೆಣ್ಣು ದೇವರ ಮೂರ್ತಿಯೂ ಪತ್ತೆಯಾಗಿದೆ. ಚಿನ್ನದ ಜೊತೆಗೆ ನೀಲಮಣಿ, ಸ್ಪಟಿಕ ಮತ್ತು ಹವಳ ಸೇರಿದಂತೆ ಅಪರೂಪದ ರತ್ನಗಳನ್ನು ಕೂಡ ಈ ಆಭರಣಗಳಲ್ಲಿ ಬಳಸಿರುವುದು ಕಂಡುಬಂದಿದೆ.
ಒಟ್ಟಾರೆ ಚಿನ್ನದ ತೂಕ ಸುಮಾರು 465 ಗ್ರಾಂ ಆಗಿದ್ದು, ಇಂದಿನ ಮಾರುಕಟ್ಟೆ ದರದಲ್ಲಿ ಅದರ ಮೌಲ್ಯ ಸುಮಾರು 35ರಿಂದ 40 ಲಕ್ಷ ರೂಪಾಯಿವರೆಗೆ ಇರಬಹುದು. ಆದರೆ ಈ ಆಭರಣಗಳ ಪ್ರಾಚೀನ ಹಾಗೂ ಐತಿಹಾಸಿಕ ಮೌಲ್ಯವನ್ನು ಅಂದಾಜಿಸಿದರೆ ಸುಮಾರು 8 ಕೋಟಿ ರೂಪಾಯಿಗೂ ಅಧಿಕವಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.
ಸಮಿತಿ ಅಧ್ಯಕ್ಷ ಎಂ.ಎಸ್. ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಕಲಾ ಇತಿಹಾಸಗಾರ ರಾಘವೇಂದ್ರ ಕುಲಕರ್ಣಿ, ಪ್ರೊ. ಚೂಡಾಮಣಿ ನಂದಗೋಪಾಲ, ಶಾಸನ ತಜ್ಞ ಹನುಮಾಪಕ್ಷಿ ಗೋಗಿ, ರತ್ನಶಾಸ್ತ್ರಜ್ಞ ಪ್ರಭು ಕಮ್ಮಾರ ಮತ್ತು ಡಾ. ಶೇಜೇಶ್ವರ ಅವರ ತಂಡ ನಾಲ್ಕು–ಐದು ಗಂಟೆಗಳ ಕಾಲ ಪ್ರತಿಯೊಂದು ಆಭರಣವನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದೆ.
ಈ ಉತ್ಖನನದಿಂದ ಲಕ್ಕುಂಡಿಯ ಟಂಕಸಾಲೆ, ವಾಣಿಜ್ಯ ಚಟುವಟಿಕೆಗಳು ಅಥವಾ ಹೆಚ್ಚಿನ ಪುರಾತನ ಅವಶೇಷಗಳು ಬೆಳಕಿಗೆ ಬರಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ. ಲಕ್ಕುಂಡಿಯು 101 ದೇವಸ್ಥಾನಗಳು ಮತ್ತು 101 ಬಾವಿಗಳಿಗೆ ಹೆಸರಾದ ಐತಿಹಾಸಿಕ ಸ್ಥಳವಾಗಿದೆ. ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರ ಕಾಲದ ಶಿಲ್ಪಕಲೆಯ ಕೇಂದ್ರವಾಗಿ ಲಕ್ಕುಂಡಿ ಪ್ರಸಿದ್ಧವಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm