ಬ್ರೇಕಿಂಗ್ ನ್ಯೂಸ್
15-03-26 04:27 pm HK News Staffer ಕರ್ನಾಟಕ
ಚಿತ್ರದುರ್ಗ, ಮಾರ್ಚ್ 15: ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್ಪೆಕ್ಟರ್ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್ಪಿ ಶಿವಕುಮಾರ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತದ ನಂತರ ಸ್ಥಳಕ್ಕೆ ಭೇಟಿ ನೀಡಿದರು.ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಘಟನೆಯ ನಂತರ 2 ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತ ಸ್ಥಳ ಹಿರಿಯೂರು ತಾಲ್ಲೂಕು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದು ಇಲ್ಲಿಯೇ ಪ್ರಕರಣ ದಾಖಲಾಗಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm