ಬ್ರೇಕಿಂಗ್ ನ್ಯೂಸ್
16-03-26 03:36 pm HK News Staffer ಕರ್ನಾಟಕ
ಲಕ್ನೋ, ಮಾರ್ಚ್ 10: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ತನ್ನನ್ನು ಐಎಎಸ್ ಅಧಿಕಾರಿ ಎಂದು ಪೋಸು ಕೊಟ್ಟು ಜನಸಾಮಾನ್ಯರಿಗೆ ಕರೆ ಮಾಡುತ್ತಿದ್ದ ರಾಹುಲ್ ಕೌಶಿಕ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ.
ಮೀರತ್ ಜಿಲ್ಲೆಯ ನೌಚಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಹುಲ್ ಕೌಶಿಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ತಾನು ಐಎಎಸ್ ಅಧಿಕಾರಿ ಎಂದು ಗುರುತಿಸಿಕೊಂಡು ಜನರನ್ನು ಬೆದರಿಸುತ್ತಿದ್ದ ಮತ್ತು ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದ ಎಂಬುದು ಈತನ ಮೇಲಿರುವ ಆರೋಪ.
ರಾಹುಲ್ ಬಂಧನದ ನಂತರ ಆತನ ಕುಟುಂಬಸ್ಥರು ಪೊಲೀಸರಿಗೆ ಐಎಎಸ್ ಪಾಸ್ ಆಗಿರುವ ಬಗ್ಗೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ಇವರು ನೀಡಿರುವ ಮಾಹಿತಿಯ ಪ್ರಕಾರ, ರಾಹುಲ್ 2008ರಲ್ಲಿ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು, ಭಾರತೀಯ ಅಂಚೆ ಸೇವೆಗೆ ಆಯ್ಕೆಯಾಗಿದ್ದ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ತರಬೇತಿಯ ಫೋಟೋಗಳು, ಪ್ರಮಾಣಪತ್ರಗಳು ಮತ್ತು ಹಳೆಯ ಪತ್ರಿಕಾ ವರದಿಗಳನ್ನು ಕುಟುಂಬವು ಪ್ರಸ್ತುತಪಡಿಸಿದೆ.
ಕುಟುಂಬದವರು ನೀಡಿದ ದಾಖಲೆಗಳನ್ನು ಪರಿಶೀಲಿಸಿದ ನಂತರ ಪೊಲೀಸರು ರಾಹುಲ್‌ಗೆ ಸ್ಟೇಷನ್ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ. ಆದರೆ, ಆ ದಾಖಲೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಶೀಲನೆ ವೇಳೆ ರಾಹುಲ್ ಕೌಶಿಕ್ ಪ್ರಸ್ತುತ ಯಾವುದೇ ಸರ್ಕಾರಿ ಹುದ್ದೆಯಲ್ಲಿ ಇಲ್ಲ ಎಂಬುದು ದೃಢಪಟ್ಟಿದೆ. ಪೊಲೀಸರ ಪ್ರಕಾರ, ಯಾರಾದರೂ ಹಿಂದೆ ಯುಪಿಎಸ್‌ಸಿ ಪರೀಕ್ಷೆ ಪಾಸ್ ಮಾಡಿದರೂ ಸಹ, ಅವರು ಈಗ ಸೇವೆಯಲ್ಲಿ ಇಲ್ಲದಿದ್ದಾಗ ತಮ್ಮನ್ನು ಐಎಎಸ್ ಅಧಿಕಾರಿ ಎಂದು ಹೇಳಿಕೊಳ್ಳುವುದು ಕಾನೂನುಬಾಹಿರವಾಗುತ್ತದೆ.
ರಾಹುಲ್ ಕೌಶಿಕ್ ತನ್ನ ಮೇಲಿನ ಕ್ರಮವನ್ನು ಪ್ರಶ್ನಿಸಿದ್ದು, ಪೊಲೀಸರು ವಿನಾಕಾರಣ ನನ್ನನ್ನು ಬಂಧಿಸಿದ್ದಾರೆ ಮತ್ತು ಅಕ್ರಮವಾಗಿ ಮೊಬೈಲ್ ವಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm