ಬ್ರೇಕಿಂಗ್ ನ್ಯೂಸ್
02-01-21 07:19 pm Prabhakar, Shivamogga ಕರ್ನಾಟಕ
ಶಿವಮೊಗ್ಗ, ಜ.02: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಗ್ರಾ.ಪಂ. ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ತಳ್ಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟೀಕಿಸಿದ್ದಾರೆ.
ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರನ್ನು ಸಕ್ರೆಬೈಲು ಆನೆ ಬಿಡಾರದ ಬಳಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲು, ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿದೆ. ಇದು ಹೋರಾಟಗಳ ನಾಡಾಗಿದ್ದು, ಇಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಸಂಘಟನೆಗೆ ಒಂದು ರೀತಿಯ ಪ್ರಯೋಗ ಶಾಲೆ ಇದ್ದಂತೆ. ಇಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದು ಸ್ವಾಗತ ಎಂದರು.
ಬಿಜೆಪಿಯ ಕಾರ್ಯಕಾರಿಣಿಯ ಸಭೆಯಲ್ಲಿ ಲವ್ ಜಿಹಾದ್, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಬರಬಹುದಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ನಾವು ಅಭೂತಪೂರ್ವ ಯಶಸ್ಸು ಪಡೆದಿದ್ದೇವೆ. ಸುಮಾರು 62 ಸಾವಿರ ಬಿಜೆಪಿ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಶಾಲಿಗಳಾಗಿದ್ದಾರೆ. ಇದು ನಮ್ಮ ಸಂಘಟನೆಗೆ ಮತ್ತಷ್ಟು ಬಲ ತಂದಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರಿದ್ದರು.
The Defeat of Congress in Gram Panchayat Elections 2020 has made them embarrassed slams Naleen Kumar Kateel in Shivamogga.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 08:55 pm
Mangaluru Staffer
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm