ಬ್ರೇಕಿಂಗ್ ನ್ಯೂಸ್
17-03-26 08:45 pm HK News Staffer ಕರ್ನಾಟಕ
ಹೈದರಾಬಾದ್, ಮಾರ್ಚ್ 17: ಹೈದರಾಬಾದ್ ಹೊರವಲಯದ ಮೊಯಿನಾಬಾದ್ ಪ್ರದೇಶದಲ್ಲಿರುವ ಮಾಜಿ ಬಿಆರ್ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರ ಫಾರ್ಮ್ಹೌಸ್ನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣ ತೀವ್ರ ಸಂಚಲನ ಮೂಡಿಸಿದೆ. ತೆಲಂಗಾಣ ಪೊಲೀಸರ ಎಲೈಟ್ ಆಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ಫೋರ್ಸ್ಮೆಂಟ್ ತಂಡ ಶನಿವಾರ ರಾತ್ರಿ ದಾಳಿ ನಡೆಸಿದ್ದು, ಪಾರ್ಟಿಯಲ್ಲಿ ಮಾಜಿ ಬಿಆರ್ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಡ್ರಗ್ಸ್ ನಶೆಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಂತೆ ದೆಹಲಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ನಮಿತ್ ಶರ್ಮಾ ಗುಂಡು ಹಾರಿಸಿದ್ದಾನೆ. ಈ ಗುಂಡು ರಿತೇಶ್ ರೆಡ್ಡಿ ಅವರ ಪರವಾನಗಿ ಹೊಂದಿದ ಬಂದೂಕಿನಿಂದ ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಒಟ್ಟು 10 ಮಂದಿ ಇದ್ದು, ಅವರಲ್ಲಿ 9 ಮಂದಿ ಪುರುಷರು ಮತ್ತು ಒಬ್ಬ ಮಹಿಳೆ ಇದ್ದರು. ಸಾರ್ವಜನಿಕ ಪ್ರತಿನಿಧಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿದಂತೆ ಹಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳದಲ್ಲಿ ಸುಮಾರು 2 ಗ್ರಾಂ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪಾರ್ಟಿಯಲ್ಲಿ ಭಾಗವಹಿಸಿದ್ದವರಲ್ಲಿ ರೋಹಿತ್ ರೆಡ್ಡಿ ಜೊತೆಗೆ ಪುಟ್ಟ ಮಹೇಶ್ ಕುಮಾರ್ ಯಾದವ್ ಸೇರಿದಂತೆ ಹಲವರು ಇದ್ದರು. ಡ್ರಗ್ ಪರೀಕ್ಷೆಯಲ್ಲಿ ಐವರು ಪಾಸಿಟಿವ್ ಬಂದಿದ್ದು, ಇವರಲ್ಲಿ ರೋಹಿತ್ ರೆಡ್ಡಿ, ನಮಿತ್ ಮಿಶ್ರಾ, ರಿತೇಶ್ ರೆಡ್ಡಿ, ಕೌಶಿಕ್ ರವಿ ಮತ್ತು ಅರ್ಜುನ್ ರೆಡ್ಡಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ತನಿಖೆಗಾಗಿ ಎಲ್ಲರನ್ನು ಹೆಚ್ಚುವರಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಂಪೂರ್ಣ ವರದಿ ಬಂದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಪಿ ಯೋಗೇಶ್ ಗೌತಮ್ ಹೇಳಿದ್ದಾರೆ.
ಇದರ ನಡುವೆ, ಪ್ರಕರಣದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಭಾರತ ರಾಷ್ಟ್ರ ಸಮಿತಿ (BRS) ಪಕ್ಷವು ರೋಹಿತ್ ರೆಡ್ಡಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಸೋಮ ಭರತ್ ಕುಮಾರ್ ನೀಡಿದ ನೋಟಿಸ್ನಲ್ಲಿ, ಈ ಘಟನೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿದ್ದು, ಸಾರ್ವಜನಿಕರಲ್ಲಿ ಕಳವಳ ಮೂಡಿಸಿದೆ ಹಾಗೂ ಪಕ್ಷದ ಇಮೇಜ್ಗೆ ಧಕ್ಕೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.
ಪಕ್ಷವು 7 ದಿನಗಳೊಳಗೆ ಲಿಖಿತವಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದು, ಅದುವರೆಗೆ ಪಕ್ಷದ ಚಟುವಟಿಕೆಗಳು ಹಾಗೂ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm