ಬ್ರೇಕಿಂಗ್ ನ್ಯೂಸ್
18-03-26 11:38 am HK News Staffer ಕರ್ನಾಟಕ
ಬೆಳಗಾವಿ, ಮಾರ್ಚ್ 18: ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣುಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ನಡೆದಿದೆ. ಮಗು ಪ್ರಿಯಾಂಕಾ ಸಾವಿನ ಹಿಂದೆ ತಂದೆಯೇ ವಿಷಪ್ರಾಶನ ಮಾಡಿರುವ ಸಾಧ್ಯತೆ ಇದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ.
ಹೆರಿಗೆ ಹಿನ್ನೆಲೆಯಲ್ಲಿ ತಾಯಿ ಶೀಲಾ ತವರು ಮನೆಯಲ್ಲಿ ವಾಸವಾಗಿದ್ದರು. ಮಾರ್ಚ್ 17ರಂದು ಮಧ್ಯಾಹ್ನ ಮಗು ಮತ್ತು ಪತ್ನಿಯನ್ನು ಭೇಟಿ ಮಾಡಲು ತಂದೆ ಭೀಮರಾಯ ಬಂದಿದ್ದಾನೆ. ಸ್ವಲ್ಪ ಸಮಯ ಪತ್ನಿ ಹಾಗೂ ಮಗುವಿನೊಂದಿಗೆ ಸಮಯ ಕಳೆದು ಬಳಿಕ ತನ್ನ ಊರಿಗೆ ಮರಳಿದ್ದಾನೆ. ಆದರೆ ಆತ ಹೋದ ಕೆಲವೇ ಹೊತ್ತಿನಲ್ಲಿ ಮಗು ಏಕಾಏಕಿ ಸಾವನ್ನಪ್ಪಿರುವುದು ಕುಟುಂಬವನ್ನು ಬೆಚ್ಚಿಬೀಳಿಸಿದೆ.
ಮಗು ಆರೋಗ್ಯವಾಗಿದ್ದರೂ, ದಿಢೀರ್ ಸಾವಿಗೆ ಕಾರಣ ಏನು ಎಂಬ ಪ್ರಶ್ನೆ ಉದ್ಭವಿಸಿದ ಬೆನ್ನಲ್ಲೇ ತಂದೆಯ ವರ್ತನೆ ಅನುಮಾನಕ್ಕೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಭೀಮರಾಯ ಸಣ್ಣ ಮಾತ್ರೆ ತಂದು ಅದರಿಂದ ಮಗುವಿಗೆ ಏನೋ ಕುಡಿಸಿದ್ದಾನೆ ಎಂಬ ಆರೋಪವನ್ನು ಪತ್ನಿ ಶೀಲಾ ಹಾಗೂ ಆಕೆಯ ಕುಟುಂಬಸ್ಥರು ಮಾಡಿದ್ದಾರೆ.
ಘಟನೆಯ ನಂತರ ಭೀಮರಾಯ ನಾಪತ್ತೆಯಾಗಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಮೃತ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆ ಮುಂದೆ ಇಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ನಾರಾಯಣ್ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಬಳಿಕ ನಿಜಾಂಶ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ. ಸದ್ಯ ಆರೋಪಿ ಭೀಮರಾಯ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm