ಬ್ರೇಕಿಂಗ್ ನ್ಯೂಸ್
21-03-26 01:22 pm HK News Staffer ಕರ್ನಾಟಕ
ಮುಂಬೈ, ಮಾರ್ಚ್ 21: ಜ್ಯೋತಿಷಿ ಹಾಗೂ ಸ್ವಯಂಘೋಷಿತ ದೇವಮಾನವನೆಂದು ಗುರುತಿಸಿಕೊಂಡಿದ್ದ ಅಶೋಕ್ ಖಾರಟ್ ವಿರುದ್ಧದ ರಾಸಲೀಲೆ ಪ್ರಕರಣದಲ್ಲಿ ಶಾಕಿಂಗ್ ಬೆಳವಣಿಗೆಯೊಂದು ನಡೆದಿದೆ.
35 ವರ್ಷದ ಮಹಿಳೆಯನ್ನು ಕಳೆದ ಮೂರು ವರ್ಷಗಳಿಂದ ಒತ್ತಾಯಪೂರ್ವಕವಾಗಿ ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಅಶೋಕ್ ಖಾರಟ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ವಶಪಡಿಸಿಕೊಂಡ ಪೆನ್‌ಡ್ರೈವ್‌ನಲ್ಲಿ 58ಕ್ಕೂ ಹೆಚ್ಚು ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿರುವ ವಿಡಿಯೋಗಳು ಪತ್ತೆಯಾಗಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ.
ಜ್ಯೋತಿಷ್ಯ, ಸಂಖ್ಯಾಶಾಸ್ತ್ರ ಹಾಗೂ ಆಧ್ಯಾತ್ಮಿಕತೆ ಹೆಸರಿನಲ್ಲಿ ಮಹಿಳೆಯರನ್ನು ಬಲೆಗೆ ಬೀಳಿಸುತ್ತಿದ್ದ ಆರೋಪ ಈತನ ಮೇಲೆ ಕೇಳಿಬಂದಿದೆ. ಈ ಪ್ರಕರಣ ರಾಜಕೀಯ ವಲಯದಲ್ಲಿಯೂ ಭಾರಿ ಸಂಚಲನ ಮೂಡಿಸಿದ್ದು ಇದೀಗ ಮಹಾರಾಷ್ಟ್ರ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಾನ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.



ಅಶೋಕ್ ಖಾರಟ್ ಹಾಗೂ ರೂಪಾಲಿ ಚಕಾನ್ಕರ್ ನಡುವಿನ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ವಿವಾದ ಮತ್ತಷ್ಟು ತೀವ್ರಗೊಂಡಿತು. ಇಬ್ಬರೂ ಒಟ್ಟಿಗೆ ಹಲವು ಸಾರ್ವಜನಿಕ ಕಾರ್ಯಕ್ರಮಗಳ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದು, ವಿಶೇಷವಾಗಿ ಖಾರಟ್‌ಗೆ ಗೌರವ ಸಲ್ಲಿಸುವ ದೃಶ್ಯಗಳು ಆಕ್ರೋಶಕ್ಕೆ ಕಾರಣವಾಗಿದ್ದವು.
ವಿಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿ, “ಮಹಿಳೆಯರ ಹಕ್ಕುಗಳ ರಕ್ಷಣೆ ಮಾಡುವ ಸ್ಥಾನದಲ್ಲಿರುವ ವ್ಯಕ್ತಿಯೇ ಆರೋಪಿಯ ಜೊತೆ ಕಾಣಿಸಿಕೊಂಡರೆ ನ್ಯಾಯ ಸಿಗುತ್ತದೆಯೇ?” ಎಂದು ಪ್ರಶ್ನೆ ಮಾಡುತ್ತಿದ್ದರು. ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ರೂಪಾಲಿ ಚಕಾನ್ಕರ್ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಅವರು, “ಅಶೋಕ್ ಖಾರಟ್ ಜ್ಯೋತಿಷಿಯಾಗಿ ಹಾಗೂ ನಿವೃತ್ತ ನೌಕಾಪಡೆ ಅಧಿಕಾರಿಯಾಗಿ ಪರಿಚಿತರಾಗಿದ್ದರು. ಕೆಲ ಕಾರ್ಯಕ್ರಮಗಳಲ್ಲಿ ಮಾತ್ರ ಭೇಟಿಯಾಗಿದ್ದೇನೆ, ಯಾವುದೇ ವೈಯಕ್ತಿಕ ಸಂಪರ್ಕ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಸ್ಫೋಟಕ ಮಾಹಿತಿ ಹೊರಬರುವ ಸಾಧ್ಯತೆ ಇದೆ.
ಇನ್ನು ತನಿಖೆಯಲ್ಲಿ ಈ ಅಶೋಕ್ ಖಾರಟ್ ಮತ್ತೊಂದು ಕರಾಳ ಮುಖ ಬಯಲಾಗಿದೆ. ಜ್ಯೋತಿಷ್ಯ, ಆಧ್ಯಾತ್ಮ ಹೆಸರಿನಲ್ಲಿ ಮೋಸ ಮಾಡುತ್ತಿದ್ದ ಈತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮಹಿಳೆಯರಿಗೆ ನೀಡತ್ತಿದ್ದ ಪ್ರಸಾದದಲ್ಲಿ ವಯಾಗ್ರ ಹಾಕಿ ಕೊಡುತ್ತಿದ್ದ ಬಳಿಕ ಕೆಲ ಹೊತ್ತು ಇರಲು ಹೇಳಿ ಕಾಮಕ್ಕೆ ಬಳಸಿಕೊಳ್ಳುತ್ತಿದ್ದ. ಈ ವಿಡಿಯೋಗಳು ಇದೀಗ ಹೊರಬಂದಿದೆ.
ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಆಧ್ಯಾಥ್ಮ, ಮಾಟ ಮಂತ್ರ ಸೇರಿದಂತೆ ಹಲವು ವಿಚಾರಗಳನ್ನು ಒಟ್ಟಿಗೆ ಸೇರಿಸಿ ತಾನು ಎಲ್ಲದಕ್ಕೂ ಪರಿಹಾರ ನೀಡುವ ಗುರೂಜಿ ಎಂದು ಗುರುತಿಸಿಕೊಂಡಿದ್ದಾರೆ. ಪರಿಹಾರ ಕೇಳಿ ಬರುತ್ತಿದ್ದ ಮಹಿಳೆಯರಿಗೆ ಆಧ್ಯಾತ್ಮ ಸೇರಿದಂತೆ ಹಲವು ಹೆಸರು ಹೇಳಿ ಕೆಲ ಪೂಜೆ ಹಾಗೂ ಧಾರ್ಮಿಕ ಪ್ರಕ್ರಿಯೆಗಳನ್ನು ಮಾಡುತ್ತಿದ್ದ. ಒಬ್ಬೊಬ್ಬ ಮಹಿಳೆಯರ ಕೂರಿಸಿ ಪೂಜೆ ಮಾಡಿಸುತ್ತಿದ್ದ. ಪೂಜೆ ಹೆಸರಿನಲ್ಲಿ ಆರಂಭದಲ್ಲೇ ವಯಾಗ್ರ ನೀಡುತ್ತಿದ್ದ. ಬಳಿಕ ವಯಾಗ್ರ ಆಕೆಯ ದೇಹದಲ್ಲಿ ಪ್ರತಿಕ್ರಿಯೆ ನೀಡುವವರೆಗೆ ಪೂಜೆ ಮಾಡುತ್ತಿದ್ದ. ಇದರ ನಡುವೆ ಆಕೆಯನ್ನು ಮೆಲ್ಲನೆ ಮುಟ್ಟಿ ಪ್ರಚೋದಿಸುವ ಕೆಲಸವನ್ನೂ ಈತ ಮಾಡುತ್ತಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗವಾಗಿದೆ.
ವಯಾಗ್ರ ಕೆಲಸ ಆರಂಭಿಸುತ್ತಿದ್ದಂತೆ ಸ್ವಯಂ ಘೋಷಿತ ದೇವಮಾನವನ ಆಟವೂ ಆರಂಭಗೊಳ್ಳುತ್ತಿತ್ತು. ಹೀಗೆ ಆಧ್ಯಾತ್ಮಿಕ ಪ್ರಕ್ರಿಯೆ ನಡುವಿನ ಈ ಅಶ್ಲೀಲ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ತಲೆ ಮೇಲೆ ಕಳಶ ರೀತಿ ಹಿಡಿದು ನಿಲಲ್ಲು ಸೂಚಿಸಿದ್ದಾನೆ. ಕೆಲವೇ ಹೊತ್ತಲ್ಲಿ ಮಹಿಳೆಯನ್ನು ಪುಸಲಾಯಿಸಿ ಕಾಮಕ್ಕೆ ಬಳಸಿಕೊಂಡಿದ್ದಾನೆ. ಈ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ದಾಳಿ ಮಾಡಿ ಅಶೋಖ್ ಖಾರಟ್ ಬಂಧಿಸಲಾಗಿದೆ. ಈತನ ಬಳಿ ಇದ್ದ ಪೆನ್‌ಡ್ರೈವ್‌ನಲ್ಲಿ 58 ವಿವಿಧ ಮಹಿಳೆಯರ ಜೊತೆ ಇದೇ ರೀತಿ ಕಾಮಕೇಳಿ ನಡೆಸಿದ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm