ಬ್ರೇಕಿಂಗ್ ನ್ಯೂಸ್
24-03-26 02:55 pm HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 24: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಆ ನಂಬಿಕೆಯನ್ನು ಬಹಿರಂಗವಾಗಿ ಪ್ರತಿಪಾದಿಸುವ ಮತ್ತು ಆಚರಿಸುವ ವ್ಯಕ್ತಿಯು ಪರಿಶಿಷ್ಟ ಜಾತಿ ಸಮುದಾಯದ ಸೌಲಭ್ಯವನ್ನು ಪಡೆಯುವಂತಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ಪೀಠವು ಈ ತೀರ್ಪು ನೀಡಿದೆ. ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ, ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.
ಪ್ರಸ್ತುತ ಪ್ರಕರಣದಲ್ಲಿ ಅರ್ಜಿದಾರರು ಕ್ರಿಶ್ಚಿಯನ್ ಧರ್ಮದಿಂದ ತಮ್ಮ ಮೂಲ ಧರ್ಮಕ್ಕೆ ಮರು ಮತಾಂತರಗೊಂಡಿಲ್ಲ. ಹಾಗಿರುವಾಗ ಎಸ್ಸಿ-ಎಸ್ಟಿ ಮೀಸಲಾತಿ ಸೌಲಭ್ಯ ಪಡೆಯಲಾಗದು ಎಂದು ಪೀಠ ಹೇಳಿದೆ.

ಅರ್ಜಿದಾರ ವ್ಯಕ್ತಿ ಒಂದು ದಶಕಕ್ಕೂ ಹೆಚ್ಚು ಕಾಲ ಪಾದ್ರಿಯಾಗಿ ಕಾರ್ಯ ನಿರ್ವಹಿಸಿದ್ದಲ್ಲದೆ, ಹಳ್ಳಿಯ ಮನೆಗಳಲ್ಲಿ ನಿಯಮಿತವಾಗಿ ಭಾನುವಾರ ಪ್ರಾರ್ಥನೆಗಳನ್ನು ನಡೆಸುತ್ತಿದ್ದರು ಎಂದು ಕೋರ್ಟ್ ಗಮನಕ್ಕೆ ತರಲಾಗಿತ್ತು. ವಾದಗಳನ್ನು ಆಲಿಸಿದ ನ್ಯಾಯಾಲಯವು, 'ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಳ್ಳುವುದರಿಂದ ಆ ವ್ಯಕ್ತಿಯ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದುಗೊಳ್ಳುತ್ತದೆ' ಎಂದು ಮಹತ್ವದ ತೀರ್ಪು ನೀಡಿತು.
ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿದ್ದ ವ್ಯಕ್ತಿಯೊಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೇಳಲಾದ ಕೆಲವು ವ್ಯಕ್ತಿಗಳ ವಿರುದ್ಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿದ್ದ ಅರ್ಜಿಯಲ್ಲಿ ಹೈಕೋರ್ಟ್ ಮತಾಂತರ ಆದವರಿಗೆ ಎಸ್ಸಿ-ಎಸ್ಟಿ ಸೌಲಭ್ಯ ಪಡೆಯಲಾಗದು ಎಂದು ಹೇಳಿತ್ತು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm