ಬ್ರೇಕಿಂಗ್ ನ್ಯೂಸ್
28-03-26 02:54 pm HK News Staffer ಕರ್ನಾಟಕ
ವಿಜಯಪುರ, ಮಾರ್ಚ್ 28: ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ತಾಯಿ ತನ್ನ ಮೂವರು ಅಪ್ರಾಪ್ತ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎಂಬ ಮಹಿಳೆ ತನ್ನ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಕೇವಲ 1 ವರ್ಷದ ಸಂತೋಷ್ ಅವರನ್ನು ಬಾವಿಗೆ ತಳ್ಳಿ ಬಳಿಕ ತಾನೂ ಸಹ ಅದೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಳಿಕ ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ವೇಳೆ ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕರಾಗಿ ಕೆಲಸಕ್ಕೆ ತೆರಳಿದ್ದರಿಂದ ಊರಲ್ಲಿ ಇರಲಿಲ್ಲ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬಾವಿಯಿಂದ ನಾಲ್ವರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇಂಡಿ ತಾಲೂಕು ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪತಿ ಶಂಕ್ರಪ್ಪ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನ್ನ ಮೂವರು ಮಕ್ಕಳ ಸಾವಿಗೆ ಪತ್ನಿ ರಾಜಶ್ರೀಯೇ ನೇರ ಕಾರಣ ಎಂದು ಆರೋಪಿಸಿದ್ದಾರೆ.
ಘಟನೆ ಇದೀಗ ಹಲವು ತಿರುವುಗಳನ್ನು ಪಡೆದುಕೊಂಡಿದ್ದು, ಸಾವಿನ ನಿಖರ ಕಾರಣ ಇನ್ನೂ ನಿಗೂಢವಾಗಿದೆ. ಗ್ರಾಮಸ್ಥರ ಪ್ರಕಾರ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಇದೇ ಮನಸ್ತಾಪದಿಂದ ರಾಜಶ್ರೀ ತೀವ್ರ ನಿರ್ಧಾರ ಕೈಗೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm