ಬ್ರೇಕಿಂಗ್ ನ್ಯೂಸ್
03-04-26 03:48 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 2: ಬಾಗಲಕೋಟ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯನ್ನು ಆಡಳಿತಾರೂಢ ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು ಸಿಎಂ ಸಿದ್ದರಾಮಯ್ಯ ಆದಿಯಾಗಿ ಇಡೀ ಸರ್ಕಾರದ ಸಚಿವರೆಲ್ಲ ಪ್ರಚಾರ ಕಣಕ್ಕಿಳಿದಿದ್ದಾರೆ. ಆದರೆ ಇದೇ ವೇಳೆ, ಎರಡೂ ಕ್ಷೇತ್ರದಲ್ಲಿ ಗೆಲುವು ಸುಲಭ ಇಲ್ಲ ಎಂಬ ಗುಪ್ತಚರ ಮಾಹಿತಿ ಬಂದಿದ್ದು ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಅದರಲ್ಲೂ ಬಾಗಲಕೋಟ ಕ್ಷೇತ್ರದಲ್ಲಿ ಗೆಲುವು ಕಷ್ಟವಾಗಬಹುದು ಎಂಬ ಮಾಹಿತಿ ಆಡಳಿತ ಪಕ್ಷವನ್ನು ಕಂಗೆಡಿಸಿದೆ.
ಎಚ್.ವೈ.ಮೇಟಿ ನಿಧನದ ಹಿನ್ನಲೆಯಲ್ಲಿ ಬಾಗಲಕೋಟ ಕ್ಷೇತ್ರ ಮತ್ತು ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದೆ. ಬಾಗಲಕೋಟದಲ್ಲಿ ಅನುಕಂಪದ ಮತ ಗಿಟ್ಟಿಸಲು ಎಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಿಜೆಪಿ ಹಿರಿಯ ನಾಯಕ ವೀರಭದ್ರಯ್ಯ ಚರಂತಿಮಠ ಅವರನ್ನು ಕಣಕ್ಕಿಳಿಸಿದೆ. ಆದರೆ ಕ್ಷೇತ್ರದಲ್ಲಿ ಕಾಂಗ್ರೆಸ್ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಜಿದ್ದಾಜಿದ್ದಿನ ಫೈಟ್ ಇರಲಿದೆಯೆಂಬ ವರದಿ ಬಂದಿದೆ ಎಂದು ಹೇಳಲಾಗುತ್ತಿದೆ.
ಗುಪ್ತಚರ ವರದಿಯಂತೆ, ಪಕ್ಷವು ತನ್ನ ರಣತಂತ್ರವನ್ನು ಬದಲಾಯಿಸಲು ಮುಂದಾಗಿದೆ. ಮೇಟಿಯವರು ತಮ್ಮ ಆಪ್ತರಾಗಿರುವುದರಿಂದ ಗೆಲ್ಲಿಸಿಕೊಳ್ಳಲೇಬೇಕೆಂಬ ಅನಿವಾರ್ಯತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಈ ಹಿನ್ನಲೆಯಲ್ಲಿ, ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಖಾಡಕ್ಕೆ ಇಳಿದಿದ್ದಾರೆ. ಅಲ್ಲದೆ, ತನ್ನ ಪರವಾಗಿರುವ ಇಡೀ ಅರ್ಧ ಸಂಪುಟವನ್ನು ಬಾಗಲಕೋಟೆಗೆ ಕಳುಹಿಸಿದ್ದಾರೆ.
ಏಪ್ರಿಲ್ ಒಂಬತ್ತರಂದು ಎರಡೂ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಬಿಜೆಪಿ ನಾಯಕರು ತಮ್ಮಲ್ಲಿರುವ ಎಲ್ಲಾ ಮನಸ್ತಾಪಗಳನ್ನು ಪಕ್ಕಕ್ಕೆ ಇಟ್ಟು, ಎರಡೂ ಕ್ಷೇತ್ರದಲ್ಲಿ ಭರ್ಜರಿ ಮತಬೇಟೆಗೆ ಇಳಿದಿದ್ದಾರೆ. ಬಿಜೆಪಿಯ ಉಚ್ಚಾಟಿತ ಬಸನಗೌಡ ಪಾಟೀಲ್ ಯತ್ನಾಳ್ ಕೂಡ, ತಮ್ಮ ಸ್ನೇಹಿತ ಎನ್ನುವ ನೆಲೆಯಲ್ಲಿ ಚರಂತಿಮಠ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.
ಸಮೀಕ್ಷೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇರಲಿದ್ದು, ಗೆಲುವಿನ ಅಂತರ ತೀರಾ ಕಮ್ಮಿ ಇರಲಿದೆ ಎನ್ನುವ ವರದಿ ಬಂದಿದೆ. ಈ ಹಿನ್ನಲೆಯಲ್ಲಿ, ಸಿದ್ದರಾಮಯ್ಯನವರು ತಮ್ಮ ಸಚಿವ ಸಂಪುಟದ ಇಪ್ಪತ್ತು ಸಚಿವರು ಮತ್ತು ನಲವತ್ತು ಶಾಸಕರನ್ನು ಬಾಗಲಕೋಟೆಯಲ್ಲಿ ಖುದ್ದಾಗಿ ಪ್ರಚಾರ ಕಣಕ್ಕೆ ನಿಯೋಜಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಆಪ್ತ ಮತ್ತು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿಯವರು ಸತತ ಹದಿನೈದು ದಿನದಿಂದ ಬಾಗಲಕೋಟೆಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಇದೇ ವೇಳೆ, ಮುಸ್ಲಿಂ ಬಂಡಾಯದಿಂದ ಸುದ್ದಿಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಂಡಾಯ ಶಮನವಾಗಿದ್ದು ಜಿಲ್ಲೆಯಲ್ಲಿ ಶಾಮನೂರು ಕುಟುಂಬದ ಪ್ರಾಬಲ್ಯ ಇರುವ ಕಾರಣ ಗೆಲುವಿನ ದಡ ಸೇರುವುದು ಕಷ್ಟವಾಗಲಿಕ್ಕಿಲ್ಲ ಎಂಬ ಮಾಹಿತಿ ಸಮೀಕ್ಷೆಯಿಂದ ಪಕ್ಷಕ್ಕೆ ಸಿಕ್ಕಿದೆ ಎನ್ನಲಾಗುತ್ತಿದೆ. ಹೀಗಿದ್ದರೂ ಎರಡೂ ಪಕ್ಷದ ನಾಯಕರು ಈ ಕ್ಷೇತ್ರವನ್ನೂ ಪಣಕ್ಕಿಟ್ಟು ಪ್ರಚಾರ ನಡೆಸುತ್ತಿದ್ದಾರೆ. ಆದರೆ ಎರಡೂ ಕ್ಷೇತ್ರಗಳು ಕಾಂಗ್ರೆಸಿನದ್ದೇ ಆಗಿರುವುದರಿಂದ ಎಲ್ಲಿ ಸೋಲಾದರೂ ಸರ್ಕಾರದ ವರ್ಚಸ್ಸಿಗೆ ಪೆಟ್ಟು ಬೀಳುತ್ತದೆ. ಬಿಜೆಪಿಗೆ ಒಂದು ಕಡೆ ಗೆಲುವಾದರೂ ಅದು ಬೋನಸ್ ಆಗುತ್ತದೆ. ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳ ಫಲಿತಾಂಶ ರಾಜ್ಯದಲ್ಲಿ ಕುತೂಹಲ ಕೆರಳಿಸಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm