ಬ್ರೇಕಿಂಗ್ ನ್ಯೂಸ್
06-04-26 08:51 pm HK News Staffer ಕರ್ನಾಟಕ
ಮೈಸೂರು, ಎಪ್ರಿಲ್ 6: ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಬದಲಾವಣೆ ವದಂತಿಯನ್ನು ತಳ್ಳಿಹಾಕಿದರು. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ ಎಂದು ಮರು ಪ್ರಶ್ನೆ ಹಾಕಿದರು.
ಹೈಕಮಾಂಡ್ ಯಾವ ಗೊಂದಲಗಳನ್ನೂ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರೂ ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಅಂತ ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು.
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು, ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ, ಇನ್ನೊಬ್ಬರು ಎಂಬ ಪ್ರಶ್ನೆಯೇ ಬರುವುದಿಲ್ಲ. ಉಪ ಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ದಿಕ್ಸೂಚಿ ಅಲ್ಲ. ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಕೂಡ ಅಲ್ಲ. ಅದರ ಫಲಿತಾಂಶದ ಮೇಲೆ ಯಾವ ಬದಲಾವಣೆಯೂ ಆಗುವುದಿಲ್ಲ. ಎರಡು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ಮೀರಿಯೂ ಈ ಸರ್ಕಾರದ ಆಡಳಿತ ದಕ್ಷತೆಗೆ ಜನ ಮತ ಹಾಕುತ್ತಾರೆ ಎಂದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm