ಬ್ರೇಕಿಂಗ್ ನ್ಯೂಸ್
15-04-26 07:05 pm HK News Staffer ಕರ್ನಾಟಕ
ಮಂಡ್ಯ, ಎಪ್ರಿಲ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠದಲ್ಲಿಂದು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.
ಉದ್ಘಾಟನೆಯ ವೇಳೆ ಪ್ರಧಾನಿ ಮೋದಿ ಅವರ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು. ದ್ರಾವಿಡ, ಚಾಲುಕ್ಯ, ಹೊಯ್ಸಳ ಮತ್ತು ಗಂಗರ ಶೈಲಿಯ ವಿನ್ಯಾಸಗಳನ್ನು ಒಳಗೊಂಡಿರುವ ಈ ಮಂದಿರವು ಒಡಿಶಾದ ಸೂರ್ಯ ದೇವಾಲಯದ ನಿರ್ಮಾಣದಿಂದ ಪ್ರೇರಣೆ ಪಡೆದಿದೆ. ಸುಮಾರು ಹತ್ತು ವರ್ಷಗಳ ನಿರಂತರ ಪರಿಶ್ರಮದಿಂದ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಮಂದಿರವು ವಾಸ್ತುಶಿಲ್ಪಿ ಶಂಕರ್ ಸ್ಥಪತಿ ಅವರ ಮೇಲ್ವಿಚಾರಣೆಯಲ್ಲಿ ತಲೆಯೆತ್ತಿ ನಿಂತಿದೆ.
ಆದಿಚುಂಚನಗಿರಿ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಪದ್ಮಭೂಷಣ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಯವರ ಸಮಾಧಿ ಸ್ಥಳವೂ ಇದಾಗಿದೆ. ಶ್ರೀಗಳು ಜನವರಿ 13, 2013ರಂದು ಲಿಂಗೈಕ್ಯರಾದರು. ಅವರ ದಿವ್ಯ ಸ್ಮರಣೆ ಹಾಗೂ ಭಕ್ತರ ದರ್ಶನಕ್ಕಾಗಿ ಅತ್ಯಂತ ಶ್ರದ್ಧೆಯಿಂದ ಈ ಭವ್ಯ ಮಂದಿರವನ್ನು ನಿರ್ಮಿಸಲಾಗಿದೆ.
ಇದೇ ವೇಳೆ, ಮೋದಿಯವರು ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತ ಗುರಿ ಸಾಧಿಸಲು ಒಂಬತ್ತು ತಪಸ್ಸು ಕೈಗೊಳ್ಳಲು ಕರೆ ನೀಡಿದರು. ತಮ್ಮ ಆದ್ಯತೆಗಳನ್ನು ವಿವರಿಸಿದ ಪ್ರಧಾನಿ ಮೋದಿ, ಆದ್ಯತೆಯಾಗಿ ನೀರಿನ ಸಂರಕ್ಷಣೆ ಮತ್ತು ಉತ್ತಮ ನೀರು ನಿರ್ವಹಣೆ ಬಗ್ಗೆ ಮಹತ್ವ ಸಾರಿದರು. ನಂತರ 'Ek Ped Maa Ke Naam' (ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನದಡಿ ಮರ ನೆಡುವುದು, ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು, “ವೋಕಲ್ ಫಾರ್ ಲೋಕಲ್” ಮೂಲಕ ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವುದು, ದೇಶೀಯ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವುದು, ರಾಸಾಯನಿಕ ರಹಿತ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ಸಿರಿಧಾನ್ಯಗಳನ್ನು ಒಳಗೊಂಡ ಆರೋಗ್ಯಕರ ಆಹಾರ ಮತ್ತು ಕಡಿಮೆ ಎಣ್ಣೆ ಬಳಕೆಯನ್ನು ಉತ್ತೇಜಿಸುವಂತೆ ಕರೆ ನೀಡಿದರು.




ಇದರ ಜೊತೆಗೆ ಯೋಗ ಮತ್ತು ಫಿಟ್ನೆಸ್ನ್ನು ಅಳವಡಿಸಿಕೊಳ್ಳುವಂತೆ, ಸೇವಾಭಾವವನ್ನು ಬೆಳೆಸುವಂತೆ ಕೂಡ ಅವರು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ಮುಖ್ಯಸ್ಥ ಹೆಚ್.ಡಿ. ದೇವೇಗೌಡ ಅವರೊಂದಿಗೆ ‘ಸೌಂದರ್ಯ ಲಹರಿ ಮತ್ತು ಶಿವ ಮಹಿಮ್ನಾ ಸ್ತೋತ್ರಂ’ ಪುಸ್ತಕವನ್ನು ಬಿಡುಗಡೆ ಮಾಡಿದರು.
ಮಂದಿರ ಉದ್ಘಾಟನೆಗೂ ಮೊದಲು ಪ್ರಧಾನಮಂತ್ರಿಗಳು ಜ್ವಾಲಾ ಪೀಠವನ್ನು ಭೇಟಿ ಮಾಡಿ ಪೂಜೆ ಸಲ್ಲಿಸಿದರು. ಪೌರಾಣಿಕ ಕಥೆಗಳ ಪ್ರಕಾರ ಇಲ್ಲಿ ಶಿವನು ತಪಸ್ಸು ಮಾಡಿದನೆಂದು ನಂಬಿಕೆ ಇದೆ. ನಂತರ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ತಾವರ್ಚಂದ್ ಗೆಹ್ಲೋಟ್, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಇಂದಿನ ಪೀಠಾಧಿಪತಿ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm