ಬ್ರೇಕಿಂಗ್ ನ್ಯೂಸ್
16-04-26 07:37 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 16: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್ ನೀಡಿ ಮತ್ತು ವಾರ್ಷಿಕ ಪರೀಕ್ಷೆಯ ಒಟ್ಟು ಅಂಕವನ್ನು 525ಕ್ಕೆ ಇಳಿಸಿ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟಿನಲ್ಲಿ ತೀವ್ರ ಹಿನ್ನಡೆಯಾಗಿದೆ.
ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸರ್ಕಾರದ ದಿಢೀರ್ ನಿರ್ಧಾರದಿಂದ ಆತಂಕಕ್ಕೊಳಗಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನಿರಾಳವಾದಂತಾಗಿದೆ.
ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.
ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಸಿದೆ.
ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರಿಂದ ವ್ಯತಿರಿಕ್ತ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ವಿವಾದವು ಕೇವಲ ಅಂಕಗಳಿಗೆ ಸೀಮಿತವಾಗದೆ, ಭಾಷಾ ನೀತಿಯ ಸಂಘರ್ಷವಾಗಿಯೂ ಬದಲಾಗಿತ್ತು. ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳು ಆ ವಿಷಯದ ಕಡೆಗೆ ಆಸಕ್ತಿ ಕಳೆದುಕೊಳ್ಳುತ್ತಾರೆ ಮತ್ತು ಇದು ಭವಿಷ್ಯದಲ್ಲಿ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರಿಗೆ ಹಿನ್ನಡೆಯಾಗಬಹುದು ಎಂಬ ವಾದ ಕೇಳಿಬಂದಿತ್ತು. ಈಗ ಹೈಕೋರ್ಟ್ ನೀಡಿದ ಆದೇಶವು ಸರ್ಕಾರದ ವಿವಾದಾತ್ಮಕ ನಿರ್ಧಾರಕ್ಕೆ ಬ್ರೇಕ್ ಹಾಕಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm