ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 08:55 pm
Mangaluru Staffer
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm