ಬ್ರೇಕಿಂಗ್ ನ್ಯೂಸ್
23-04-26 10:54 am HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 23: ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆ–1ರ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.
ಸಚಿವರ ಘೋಷಣೆ ಬಳಿಕ ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಬಾರಿ ಕರ್ನಾಟಕ ಹೈಕೋರ್ಟ್ ಆದೇಶದ ಹಿನ್ನೆಲೆ ಮಹತ್ವದ ಬದಲಾವಣೆ ಮಾಡಲಾಗಿದ್ದು, ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಾಗಿ ಅಂಕ ನೀಡಲಾಗಿದೆ. ಇದರ ಪರಿಣಾಮವಾಗಿ ಈ ವರ್ಷದ ಫಲಿತಾಂಶವನ್ನು 525 ಅಂಕಗಳ ಬದಲು 625 ಅಂಕಗಳಿಗೆ ಪ್ರಕಟಿಸಲಾಗುತ್ತಿದೆ.
ಈ ಬಾರಿ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ವಿದ್ಯಾರ್ಥಿಗಳಿಗೆ ಮತ್ತೊಂದು ವಿಶೇಷ ಸೌಲಭ್ಯವಾಗಿ, ಈ ವರ್ಷ ಮೊದಲ ಬಾರಿಗೆ ಅಂಕಪಟ್ಟಿಯನ್ನು DigiLocker ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆಯ ನಂತರ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಹಾಗೂ ಕರ್ನಾಟಕ ಒನ್ ಮೊಬೈಲ್ ಆಪ್‌ನಲ್ಲಿ ವೀಕ್ಷಿಸಬಹುದಾಗಿದೆ.
2025-26 ರ SSLC ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಯಶಸ್ವಿಯಾಗಿ ಪೂರ್ಣಗೊಂಡಿತ್ತು. ಆದರೆ ವಿದ್ಯಾರ್ಥಿಗಳಲ್ಲಿ ಹಿಂದಿ ಪರೀಕ್ಷೆಯ ಬಗ್ಗೆ ಗೊಂದಲ ಉಂಟಾಗಿತ್ತು. ಏಕೆಂದರೆ ಸರ್ಕಾರ ಏಕಾಏಕಿ ಹಿಂದಿ ಭಾಷೆ ಅಂಕಗಳ ಬದಲು, ಗ್ರೇಡ್ ನೀಡುವುದಾಗಿ ಘೋಷಣೆ ಮಾಡಿತ್ತು. ಇದರ ನಡುವೆಯೇ ಹಲವರು ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಕೋರ್ಟ್, ಅಂಕಗಳನ್ನೇ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡಿ ಆದೇಶ ಜಾರಿ ಮಾಡಿತ್ತು. ಇದರೊಂದಿಗೆ ಸರ್ಕಾರ ಕೂಡ ಕೋರ್ಟ್ ಆದೇಶದಂತೆ ತೃತೀಯ ಭಾಷೆಗೆ ಅಂಕ ನೀಡಲು ಮುಂದಾಗಿದೆ. ಆದರೆ ಈ ಬಾರಿ ತೃತೀಯ ಭಾಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗುವ ಸಾಧ್ಯತೆ ಇದೆ. ಏಕೆಂದರೆ ಫೇಲ್ ಆಗುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಭಾಗ್ಯ ನೀಡುವ ಚಿಂತನೆಯನ್ನು ಸರ್ಕಾರ ಮಾಡಿದೆ. ಇದರೊಂದಿಗೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಫಲಿತಾಂಶ ಸಿಗುವ ನಿರೀಕ್ಷೆ ಇದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm