ಬ್ರೇಕಿಂಗ್ ನ್ಯೂಸ್
25-04-26 10:56 pm HK Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 25: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದು ಪರಿಹಾರ ನೀಡಬೇಕೆಂದು ಬಸ್ ಸಿಬಂದಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಜಿಗಣಿ ಡಿಪೋದಲ್ಲಿ ನಡೆದಿದೆ.
32 ವರ್ಷದ ರಮೇಶ್ ಸಾವನ್ನಪ್ಪಿದ ಬಿಎಂಟಿಸಿ ಬಸ್ ಚಾಲಕನಾಗಿದ್ದು ಎದೆ ನೋವು ಬರುತ್ತಿದ್ದಾಗಲೇ ಬಸ್ಸನ್ನು ನಿಲ್ಲಿಸಿ ಕುಸಿದು ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಸ್ ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಿಂದ ಬೇಸತ್ತ ಬಿಎಂಟಿಸಿ ಜಿಗಣಿ ಡಿಪೋದ ಸಹೋದ್ಯೋಗಿಗಳು ಸಂಜೆಯಾಗುತ್ತಲೇ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ರಾತ್ರಿ ವರೆಗೂ ಧರಣಿ ನಡೆಸಿದ್ದಾರೆ. ಈ ಹಿಂದೆ ಒಬ್ಬ ಚಾಲಕ ಇದೇ ರೀತಿ ಮೃತಪಟ್ಟಿದ್ದು ಬಿಎಂಟಿಸಿ ಪರಿಹಾರ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಪೋ ಮ್ಯಾನೇಜರ್ ಕೌಸರ್ ಬಾನು ಮೇಲೆ ಆಕ್ರೋಶ ತಿರುಗಿದ್ದು ಕಳೆದ ಬಾರಿ ಇದೇ ರೀತಿ ಮಲ್ಲಿಕಾರ್ಜುನ ಎಂಬಾತ ಸಾವನ್ನಪ್ಪಿದ್ದರು. ಆದರೆ ಅವರ ಕುಟುಂಬಕ್ಕೆ ಕನಿಷ್ಠ ಇನ್ಶುರೆನ್ಸ್ ಸಹ ಬಂದಿಲ್ಲ. ಇದೀಗ ರಮೇಶ್ ಕುಟುಂಬಕ್ಕು ಅದೇ ರೀತಿ ಅನ್ಯಾಯವಾಗುವ ಸಾಧ್ಯತೆ ಇದೆ. ಕೂಡಲೇ ಪರಿಹಾರ ಘೋಷಣೆ ಮಾಡಿ ಅವರಿಗೆ ನ್ಯಾಯ ಕೊಡಿಸುವಂತೆ ಸಿಬಂದಿ ಒತ್ತಾಯಿಸಿದ್ದಾರೆ. ಆದರೆ ಪ್ರತಿಭಟನೆ ನಡೆಸಿ ನ್ಯಾಯ ಕೇಳಿದ್ದಕ್ಕೆ ಸಿಬ್ಬಂದಿಗೆ ಗೇಸ್ ಪಾಸ್ ನೀಡಲು ಕೌಸರ್ ಬಾನು ಪ್ಲಾನ್ ಮಾಡಿದ್ದಾರೆಂಬ ಭಾವನೆಯಲ್ಲಿ ರಾತ್ರಿ ವರೆಗೂ ಧಿಕ್ಕಾರ ಕೂಗುತ್ತಾ ಧರಣಿ ನಡೆಸಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm