ಬ್ರೇಕಿಂಗ್ ನ್ಯೂಸ್
26-04-26 08:05 pm HK News Staffer ಕರ್ನಾಟಕ
ಹುಬ್ಬಳ್ಳಿ, ಎಪ್ರಿಲ್ 26: ನಾಯಕತ್ವ ಬದಲಾವಣೆ ಪ್ರಸ್ತಾಪ ಇಲ್ಲ. ಹಿರಿಯ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಅವರು ತಮ್ಮ ಮಂತ್ರಿ ಮಂಡಲದ ಸಭೆ ಮತ್ತು ಶಾಸಕರ ಸಭೆ ಮಾಡುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ನಾಯಕತ್ವ ಬದಲಾವಣೆ ಮಾತೇ ಇಲ್ಲ. ಈ ಕುರಿತು ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ವಿವಿಧ ರಾಜ್ಯಗಳು ಹಾಗೂ ರಾಜ್ಯದಲ್ಲಿನ ಉಪ ಚುನಾವಣೆ ಫಲಿತಾಂಶ ಮೇ 4ರಂದು ಬರಲಿದ್ದು, ನಂತರ ಸಂಪುಟ ವಿಸ್ತರಣೆ ವಿಷಯ ಚರ್ಚೆಗೆ ಬರಲಿದೆ.
ಈಗಿರುವ ಶೇ.50 ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜನೆ ಮಾಡಬೇಕು. ಉಳಿದವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಒತ್ತಾಯಿಸಿದ್ದಾರೆ. ಇದು ನಾನು ಸೇರಿದಂತೆ ಪ್ರತಿಯೊಬ್ಬ ಕಾರ್ಯಕರ್ತನ ಒತ್ತಾಯವಾಗಿದೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm