ಬ್ರೇಕಿಂಗ್ ನ್ಯೂಸ್
11-08-20 05:54 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಘಟನೆ ನಡೆದಿದ್ದು ಉದ್ರಿಕ್ತರ ಗುಂಪು ಶಾಸಕರ ಮನೆ ಹಾಗೂ ಪೊಲೀಸ್ ವಾಹನಗಳಿಗೂ ದಾಳಿ ನಡೆಸಿದ್ದಾರೆ.
ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಶಾಸಕರ ಮನೆಯ ಮತ್ತು ಠಾಣೆ ಎದುರು ಜನರು ಜಮಾಯಿಸಿದ್ದು, ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಠಾಣೆಯ ಮುಂದಿದ್ದ ಡಿಸಿಪಿ ಶರಣಪ್ಪ ಅವರ ಕಾರು, ಗಸ್ತು ವಾಹನವನ್ನು ಜಖಂಗೊಳಿಸಿದ್ದಾರೆ. ಕೈಯಲ್ಲಿ ರಾಡ್, ದೊಣ್ಣೆ ಹಿಡಿದು ಬಂದಿರುವ ಗುಂಪು ಆವೇಶದಿಂದ ವರ್ತಿಸುತ್ತಿದೆ. ಪೊಲೀಸರ ವಾಹನಕ್ಕೆ ಬೆಂಕಿ ಹಾಕಲಾಗಿದ್ದು ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. 50 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಇಕ್ಕಿದ್ದಾರೆ. ಪೊಲೀಸರು ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ.


ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯ ಹತ್ತಿರದ ಸಂಬಂಧಿಕನೊಬ್ಬ, ಮಹಮ್ಮದ್ ಪೈಗಂಬರ್ ಬಗ್ಗೆ ಫೇಸ್ ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ಕುರಿತು ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗ್ತಿದೆ. ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಸಂದರ್ಭದಲ್ಲಿ ಡಿ. ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಬಳಿಕ ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಬಂದು ಗಲಾಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸ್ಥಳಕ್ಕೆ ಬಂದಿದ್ದು ಹೆಚ್ಚುವರಿ ಪಡೆಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm