ಬ್ರೇಕಿಂಗ್ ನ್ಯೂಸ್
04-05-26 07:16 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 4: ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ 255 ಮತಗಳು ಅಸಿಂಧುವಾಗಿದ್ದು ಈ ಹಿಂದೆ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಗೆಲುವಾಗಿದೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ. 52 ಮತಗಳ ಮುನ್ನಡೆಯೊಂದಿಗೆ, ಡಿಎನ್ ಜೀವರಾಜ್ ಶಾಸಕರಾಗಿ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯ ಗಳಿಸಿದ್ದರು. ಆದರೆ, ಈ ಫಲಿತಾಂಶವನ್ನು ಪ್ರಶ್ನಿಸಿ ಜೀವರಾಜ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಪ್ರಿಲ್ 6ರಂದು ಪೋಸ್ಟಲ್ ಬ್ಯಾಲೆಟ್‌ಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಈ ಪ್ರಕ್ರಿಯೆ ಆರಂಭವಾಗಿ ಮಧ್ಯರಾತ್ರಿ ವರೆಗೂ ಮುಂದುವರಿಯಿತು. ಮರು ಪರಿಶೀಲನೆ ವೇಳೆ ಫಲಿತಾಂಶದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ.
ಜೀವರಾಜ್ ಅವರಿಗೆ ಮೊದಲು 692 ಮತಗಳು ಇದ್ದರೆ, ಮರು ಎಣಿಕೆಯಲ್ಲಿ 690 ಮಾನ್ಯ ಮತಗಳು ಲಭ್ಯವಾಗಿವೆ. ಆದರೆ, ರಾಜೇಗೌಡರ ಮತಗಳು 569ರಿಂದ ನೇರವಾಗಿ 314ಕ್ಕೆ ಇಳಿದಿದ್ದು, 255 ಮತಗಳ ಕಡಿತ ಕಂಡುಬಂದಿದೆ. ಈ ದೊಡ್ಡ ವ್ಯತ್ಯಾಸವೇ ಅಂತಿಮ ಫಲಿತಾಂಶವನ್ನು ಸಂಪೂರ್ಣವಾಗಿ ತಲೆಕೆಳಗಾಗಿಸಿದೆ.
ಫಲಿತಾಂಶ ಬೆನ್ನಲ್ಲೇ ಚುನಾವಣಾಧಿಕಾರಿಗಳು ಜನಪ್ರತಿನಿಧಿತ್ವ ಕಾಯ್ದೆ 1951 ಮತ್ತು ಚುನಾವಣಾ ನಿಯಮಾವಳಿಗಳ ಪ್ರಕಾರ ಜೀವರಾಜ್ ಅವರನ್ನು ಅಧಿಕೃತವಾಗಿ ಶಾಸಕರಾಗಿ ಘೋಷಿಸಿದ್ದಾರೆ. ಈ ಘೋಷಣೆಯೊಂದಿಗೆ ರಾಜೇಗೌಡರು ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಜೇಗೌಡರು ಮರು ಎಣಿಕೆ ಪ್ರಕ್ರಿಯೆ ಮೇಲೆ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ತಮ್ಮ ಪರವಾಗಿ ಬಂದಿದ್ದ ಕೆಲವು ಬ್ಯಾಲೆಟ್‌ಗಳಲ್ಲಿ ಮತಗಳನ್ನು ತಿರುಚಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm