ಬ್ರೇಕಿಂಗ್ ನ್ಯೂಸ್
04-05-26 10:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 04: ಬಾತುಕೋಳಿ ಹಿಡಿಯಲು ಕೆರೆಗೆ ಇಳಿದ ನಾಲ್ವರು ಮಕ್ಕಳು ನೀರು ಪಾಲಾದ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಸೋಮವಾರ ನಡೆದಿದೆ. ಮಕ್ಕಳು ಮೃತಪಟ್ಟಿರುವ ಘಟನೆ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂಬ ನಾಲ್ವರು ಮಕ್ಕಳು ಮೃತಪಟ್ಟವರಾಗಿದ್ದು, ಇವರು ಎಲ್ಲರೂ 5 ರಿಂದ 12 ವರ್ಷದೊಳಗಿನವರಾಗಿದ್ದಾರೆ.
ಇದೇ ವೇಳೆ ನಾಲ್ಕು ವರ್ಷದ ಅರ್ಮಾನ್ ಎಂಬ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾನೆ. ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಪೊಲೀಸರು ತಿಳಿಸಿದ್ದು ಹೀಗೆ: ಸಂಬಂಧಿಕರ ಮನೆಗೆ ಬಂದಿದ್ದ ಮಕ್ಕಳು ಆಟವಾಡುತ್ತಿದ್ದ ವೇಳೆ ಬಾತುಕೋಳಿ ಕೆರೆಗೆ ಹೋಗಿರುವುದನ್ನು ನೋಡಿ ಅದನ್ನು ಹಿಡಿಯಲು ಕೆರೆಗೆ ಇಳಿದಿದ್ದಾರೆ. ಈ ವೇಳೆ ಆಳವಾದ ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಘಟನೆ ತಿಳಿದ ತಕ್ಷಣ ಸ್ಥಳೀಯರು ಹಾಗೂ ಪೋಷಕರು ಕೆರೆಗೆ ಧಾವಿಸಿ ಮಕ್ಕಳನ್ನು ರಕ್ಷಿಸಲು ಯತ್ನಿಸಿದರೂ ಫಲಕಾರಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದು, ಎಲ್ಲಾ ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮಸ್ಥರು ಹಾಗೂ ಕುಟುಂಬದ ಸದಸ್ಯರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.
ನಾಲ್ವರು ಮಕ್ಕಳನ್ನು ಕಳೆದುಕೊಂಡ ಕುಟುಂಬ ಸದಸ್ಯರಲ್ಲಿ ದುಃಖ ಮಡುಗಟ್ಟಿದೆ. ಈ ದುರ್ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮಕ್ಕಳ ಸುರಕ್ಷತೆ ಬಗ್ಗೆ ಎಚ್ಚರಿಕೆ ಅಗತ್ಯವಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm