ಬ್ರೇಕಿಂಗ್ ನ್ಯೂಸ್
06-05-26 07:41 pm HK News Desk ಕರ್ನಾಟಕ
ಬೆಂಗಳೂರು, ಮೇ 6 ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದರೂ, ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿ ಅಚ್ಚರಿ ಮೂಡಿಸಿದ್ದಾರೆ.
"ಹೈಕಮಾಂಡ್ ಹೇಳಿದರೆ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿ ನಾನೇ ಇರುತ್ತೇನೆ. ನಾನು ಕೇವಲ ಹೈಕಮಾಂಡ್ ಮಾತನ್ನಷ್ಟೇ ಕೇಳುವುದು. ನೀವು ಎಷ್ಟೇ ಬಾರಿ ಈ ಪ್ರಶ್ನೆ ಕೇಳಿದರೂ ನನ್ನ ಉತ್ತರ ಹೈಕಮಾಂಡ್ ಅಷ್ಟೇ. ನನ್ನನ್ನು ಇರಿ ಎಂದರೆ ಇರುತ್ತೇನೆ ಎಂದು ಹೇಳುವ ಮೂಲಕ ಮತ್ತೊಂದು ದಾಳ ಉರುಳಿಸಿದ್ದಾರೆ. ನಿನ್ನೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಈ ಗೊಂದಲದ ಬಗ್ಗೆ ಹೈಕಮಾಂಡ್ ನಾಯಕರೇ ಸ್ಪಷ್ಟಪಡಿಸಬೇಕು ಎಂದು ಹೇಳಿಕೆ ನೀಡಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ವರ್ಷ ಸುಭದ್ರವಾಗಿರುತ್ತದೆ. ಸರ್ಕಾರದ ಬಗ್ಗೆ, ನಾಯಕತ್ವದ ಬಗ್ಗೆ ಬೇರೆ ಯಾರು ಏನೇ ಮಾತನಾಡಿದರೂ ಅದು ಅವರ ವೈಯಕ್ತಿಕ ಹೇಳಿಕೆ' ಎಂದು ಸಿದ್ದರಾಮಯ್ಯ ಹೇಳಿದರು.
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್. ಜೀವರಾಜ್ ಗೆದ್ದಿರುವ ವಿಚಾರದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು. 'ಇದು ಬಿಜೆಪಿಯವರು ಮಾಡಿರುವ ಕ್ರಿಮಿನಲ್ ಪಿತೂರಿ. ಅಂದು ಫಲಿತಾಂಶ ಬರುವಾಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು. ಅವರ ನಿರ್ದೇಶನದಂತೆ ಚುನಾವಣಾ ಸಿಬ್ಬಂದಿಗಳು ಮತ್ತು ಜೀವರಾಜ್ ಸೇರಿಕೊಂಡು ಅಂಚೆ ಮತಗಳನ್ನು ತಿದ್ದಿದ್ದಾರೆ. ಅಂದು ಮತ ಪತ್ರದಲ್ಲಿ ಇಲ್ಲದ ಗೆರೆಗಳು ಈಗ ಹೇಗೆ ಬಂದವು? ಇದು ಖಚಿತವಾಗಿ ನಡೆದಿರುವ ಪಿತೂರಿ. ಈ ವಿಚಾರವಾಗಿ ನಾವು ಸುಮ್ಮನೆ ಕೂರುವುದಿಲ್ಲ, ನ್ಯಾಯಾಲಯದ ಮೊರೆ ಹೋಗುತ್ತೇವೆ' ಎಂದು ಗುಡುಗಿದರು.
ರಾಹುಲ್ ಗಾಂಧಿ ಭೇಟಿ ಮತ್ತು ಸಂಪುಟ ಪುನಾರಚನೆಯ ಕುರಿತ ಊಹಾಪೋಹಗಳಿಗೆ ತೆರೆ ಎಳೆದ ಸಿಎಂ, 'ರಾಹುಲ್ ಗಾಂಧಿ ಅವರು ಇಲ್ಲಿಯವರೆಗೆ ನನ್ನನ್ನು ದೆಹಲಿಗೆ ಕರೆದಿಲ್ಲ. ನಾನು ಕೂಡ ಅವರ ಅಪಾಯಿಂಟ್ ಮೆಂಟ್ ಕೇಳಿಲ್ಲ. ಅವರು ಕರೆದರೆ ನಾನು ಹೋಗುತ್ತೇನೆ. ಅಪಾಯಿಂಟ್ಮೆಂಟ್ ಫಿಕ್ಸ್ ಆದ ಮೇಲೆ ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎಂಬುದು ಗೊತ್ತಾಗಲಿದೆ. ಸದ್ಯಕ್ಕಂತೂ ನನ್ನ ದೆಹಲಿ ಪ್ರವಾಸ ನಿಗದಿಯಾಗಿಲ್ಲ' ಎಂದು ತಿಳಿಸಿದ್ದಾರೆ.
ಒಂದೆಡೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಹಂಚಿಕೆ ಇಲ್ಲವೆಂದು ಹೇಳಿದ್ದರೂ ಡಿಕೆಶಿ ಕಡೆಯವರು ಮೇ 15ಕ್ಕೆ ಗಿಫ್ಟ್ ನೀಡಲಿದ್ದಾರೆಂದು ಹೇಳಿಕೆ ಕೊಟ್ಟು ಗೊಂದಲ ಸೃಷ್ಟಿಸುತ್ತಿದ್ದಾರೆ. ಇದೇ ವೇಳೆ, ಸಚಿವ ಸಂಪುಟ ಸರ್ಜರಿ ಬಗ್ಗೆಯೂ ಮಾತು ಕೇಳಿಬರುತ್ತಿದ್ದು ಇದಕ್ಕೆಲ್ಲ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲೇಬೇಕು. ಆದರೆ ಇದನ್ನೇ ಡಿಕೆಶಿ ಪಾಳಯದ ಶಾಸಕರು ಸಿಎಂ ಬುಲಾವ್ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm