ಬ್ರೇಕಿಂಗ್ ನ್ಯೂಸ್
07-05-26 03:10 pm HK News Staffer ಕರ್ನಾಟಕ
ಬೆಂಗಳೂರು, ಮೇ 7: ರಾಜ್ಯ ರಾಜಕಾರಣ ಮತ್ತು ಪೊಲೀಸ್ ಇಲಾಖೆಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡಿಜಿಪಿ ಡಾ. ಕೆ. ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಮಹಿಳಾ ಸಿಬ್ಬಂದಿಯೊಂದಿಗೆ ಕಚೇರಿಯಲ್ಲೇ ಅಸಭ್ಯವಾಗಿ ವರ್ತಿಸಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಅಮಾನತು ಆದೇಶವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ.
1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಆಗಿರುವ ರಾಮಚಂದ್ರ ರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತೆ ಸೇವೆಗೆ ಮರು ಸೇರ್ಪಡೆಗೊಳಿಸಲಾಗಿದೆ. ಜೊತೆಗೆ ಅವರನ್ನು ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹುದ್ದೆಯನ್ನು ಸಿಐಡಿ ಡಿಜಿಪಿ ಹುದ್ದೆಗೆ ಸಮಾನವೆಂದು ಪರಿಗಣಿಸಲಾಗಿದೆ.
ಸಂಚಲನ ಸೃಷ್ಟಿಸಿದ್ದ ವೈರಲ್ ವಿಡಿಯೋ
ಕಳೆದ ಜನವರಿಯಲ್ಲಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ಮೂರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದವು. ಪೊಲೀಸ್ ಸಮವಸ್ತ್ರ ಧರಿಸಿದ್ದ ವೇಳೆ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಆಪ್ತವಾಗಿ ವರ್ತಿಸುತ್ತಿರುವ ದೃಶ್ಯಗಳು ವೈರಲ್ ಆಗಿದ್ದವು.
ವಿಡಿಯೋದಲ್ಲಿ ಮಹಿಳೆಯ ಮೈ-ಕೈ ಮುಟ್ಟುವುದು, ಚುಂಬಿಸುವ ರೀತಿಯ ದೃಶ್ಯಗಳು ಕಂಡುಬಂದಿದ್ದರಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಈ ಘಟನೆ ಭಾರೀ ಮುಜುಗರ ಉಂಟುಮಾಡಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸರ್ಕಾರ ಜನವರಿ 19ರಂದು ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಿತ್ತು. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿದ್ದ ಅವರ ವಿರುದ್ಧ ಇಲಾಖಾ ಮಟ್ಟದಲ್ಲಿ ವಿಚಾರಣೆ ಆರಂಭವಾಗಿತ್ತು.
ಆದರೆ ಇದೀಗ ಅಮಾನತು ಆದೇಶವನ್ನು ವಾಪಸ್ ಪಡೆಯುವ ಮೂಲಕ ಸರ್ಕಾರ ರಿಲೀಫ್ ನೀಡಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಬಿ.ಎಸ್. ಸಂಜಯ್ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ.
“ನಾನು ಸಾಕಷ್ಟು ಸಫರ್ ಆಗಿದ್ದೇನೆ…”
ವೈರಲ್ ವಿಡಿಯೋ ಪ್ರಕರಣದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ರಾಮಚಂದ್ರ ರಾವ್, ಗೃಹ ಸಚಿವ ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದರು. “ನನ್ನ ಸಸ್ಪೆನ್ಶನ್ ಬಗ್ಗೆ ಮಾತಾಡಿದ್ದೇನೆ. ತನಿಖೆ ನಡೆಯುತ್ತಿದೆ. ನನ್ನ ಮೇಲೆ ಯಾವುದೇ ಕೇಸ್ ಇಲ್ಲ. ಈಗಲೇ ಸಾಕಷ್ಟು ಸಫರ್ ಆಗಿದ್ದೇನೆ, ದಯವಿಟ್ಟು ಬಿಡಿ,” ಎಂದು ಹೇಳಿದ್ದರು.
ನಿವೃತ್ತಿಗೆ ಮುನ್ನ ಮರುನೇಮಕ
ಮೂಲಗಳ ಪ್ರಕಾರ, ಇದೇ ತಿಂಗಳ 31ರಂದು ರಾಮಚಂದ್ರ ರಾವ್ ನಿವೃತ್ತಿಯಾಗಲಿದ್ದು, ನಿವೃತ್ತಿಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಸರ್ಕಾರ ಅವರ ಅಮಾನತು ಆದೇಶ ಹಿಂಪಡೆದು ಮರು ನೇಮಕ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
ಗಂಭೀರವಾದ ನೈತಿಕ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವ ಮೊದಲೇ ಮತ್ತೆ ಇಂತಹ ಉನ್ನತ ಹುದ್ದೆಗೆ ನಿಯೋಜಿಸಿರುವುದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕಚೇರಿಯಲ್ಲೇ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಡಿಯೋ ಸಾಕ್ಷ್ಯಗಳಿದ್ದರೂ ಸರ್ಕಾರ ಮೃದು ಧೋರಣೆ ತೋರುತ್ತಿರುವುದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm