ಬ್ರೇಕಿಂಗ್ ನ್ಯೂಸ್
08-05-26 12:21 pm HK News Staffer ಕರ್ನಾಟಕ
ಕಲಬುರಗಿ, ಮೇ 8: ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್ ಫೋನ್‌ಗಳನ್ನು ಪತ್ತೆ ಹಚ್ಚುವಲ್ಲಿ ಕಲಬುರಗಿ ನಗರ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಕೇವಲ ಎರಡು ತಿಂಗಳ ಅವಧಿಯಲ್ಲಿ ವಿವಿಧ ಕಂಪನಿಗಳ ಸುಮಾರು 1 ಕೋಟಿ 44 ಲಕ್ಷ 90 ಸಾವಿರ ರೂ. ಮೌಲ್ಯದ 785 ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚಿ, ಅವುಗಳನ್ನು ಮೂಲ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ಬಸ್ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಕಳೆದುಹೋಗಿದ್ದ ಮೊಬೈಲ್‌ಗಳ ಕುರಿತು ‘ಇ-ಲಾಸ್ಟ್’ ಹಾಗೂ ‘ಸಿಇಐಆರ್’ ಪೋರ್ಟಲ್‌ನಲ್ಲಿ ದಾಖಲಾಗಿದ್ದ ದೂರುಗಳ ಆಧಾರದಲ್ಲಿ ‘ಆಪರೇಷನ್ ಭರವಸೆ’ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಹೇಳಿದರು.
ವಿವಿಧ ರಾಜ್ಯಗಳಲ್ಲೂ ಕಾರ್ಯಾಚರಣೆ
ಪತ್ತೆಯಾದ 785 ಮೊಬೈಲ್‌ಗಳ ಪೈಕಿ ಕರ್ನಾಟಕದಲ್ಲೇ 688 ಮೊಬೈಲ್‌ಗಳು ದೊರೆತಿವೆ. ಅದರಲ್ಲೂ ಕಲಬುರಗಿ ನಗರದಲ್ಲೇ ಅತಿ ಹೆಚ್ಚು 487 ಮೊಬೈಲ್‌ಗಳು ಪತ್ತೆಯಾಗಿವೆ. ವಿಜಯಪುರದಲ್ಲಿ 20, ಬೀದರ್‌ನಲ್ಲಿ 18, ಬೆಂಗಳೂರಿನಲ್ಲಿ 17, ಯಾದಗಿರಿಯಲ್ಲಿ 16, ರಾಯಚೂರಿನಲ್ಲಿ 12, ವಿಜಯನಗರದಲ್ಲಿ 8 ಹಾಗೂ ಬಳ್ಳಾರಿಯಲ್ಲಿ 7 ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಹೊರಗೂ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಾರಾಷ್ಟ್ರದಲ್ಲಿ 41, ತೆಲಂಗಾಣದಲ್ಲಿ 23, ಆಂಧ್ರ ಪ್ರದೇಶದಲ್ಲಿ 23, ಬಿಹಾರದಲ್ಲಿ 7 ಮತ್ತು ಉತ್ತರ ಪ್ರದೇಶದಲ್ಲಿ 3 ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರ ಸಲಹೆ
ಮೊಬೈಲ್‌ಗಳ ಸುರಕ್ಷತೆಗಾಗಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ ಪೊಲೀಸ್ ಆಯುಕ್ತರು, ಮೊಬೈಲ್‌ಗಳಿಗೆ ಕಡ್ಡಾಯವಾಗಿ ಬಲವಾದ ಪಾಸ್‌ವರ್ಡ್ ಅಥವಾ ಥಂಬ್ ಲಾಕ್ ಅಳವಡಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ‘Find My Device’ ಸೌಲಭ್ಯವನ್ನು ಸಕ್ರಿಯವಾಗಿಡಬೇಕು ಎಂದರು.
ಮೊಬೈಲ್ ಕಳೆದುಹೋದ ತಕ್ಷಣವೇ ‘ಇ-ಲಾಸ್ಟ್’ ಅಥವಾ ‘CEIR’ ಪೋರ್ಟಲ್‌ನಲ್ಲಿ ದೂರು ದಾಖಲಿಸಿದರೆ, ಫೋನ್ ದುರ್ಬಳಕೆ ತಡೆಯಲು ಹಾಗೂ ಪೊಲೀಸರು ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಡಿಮೆ ಬೆಲೆಯ ಮೊಬೈಲ್ ಖರೀದಿಸುವ ಮುನ್ನ ಎಚ್ಚರ!
ದಾಖಲೆಗಳಿಲ್ಲದೇ ಕಡಿಮೆ ಬೆಲೆಗೆ ಮಾರಾಟವಾಗುವ ಮೊಬೈಲ್‌ಗಳನ್ನು ಖರೀದಿಸಬಾರದು ಎಂದು ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಪರಿಚಿತರು ಮಾರಾಟ ಮಾಡುವ ಫೋನ್‌ಗಳು ಕಳ್ಳತನದ ವಸ್ತುಗಳಾಗಿರುವ ಸಾಧ್ಯತೆ ಇರುವುದರಿಂದ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದಾರೆ.
‘ಸಾರ್ವಜನಿಕರು ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಾಗ ಕಡ್ಡಾಯವಾಗಿ ಇ–ಲಾಸ್ಟ್/ ಸಿಇಐಆರ್ ಪೋರ್ಟಲ್‌ನಲ್ಲಿ ದೂರು ದಾಖಲಿಸಬೇಕು. ಬಸ್, ರೈಲು ನಿಲ್ದಾಣ ಸೇರಿದಂತೆ ಯಾವುದೇ ಕಡೆಗಳಲ್ಲಿ ದಾಖಲೆಗಳು ಇಲ್ಲದ, ಕಡಿಮೆ ಬೆಲೆಗೆ ಸಿಗುವ ಮೊಬೈಲ್ ಫೋನ್‌ಗಳನ್ನು ಖರೀದಿಸಬೇಡಿ. ಅಪರಿಚಿತರು ಮಾರುವ ಮೊಬೈಲ್‌ಗಳು, ಕದ್ದ ವಸ್ತುಗಳಾಗಬಹುದು. ಇವುಗಳಿದ ಜನರು ಎಚ್ಚರಿಕೆಯಿಂದಿರಬೇಕು.
ಡಾ.ಶರಣಪ್ಪ ಎಸ್.ಡಿ
ಪೊಲೀಸ್ ಕಮೀಷನರ್, ಕಲಬುರಗಿ
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm