ಬ್ರೇಕಿಂಗ್ ನ್ಯೂಸ್
11-05-26 09:36 pm HK News Staffer ಕರ್ನಾಟಕ
ನವದೆಹಲಿ, ಮೇ 11 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಮರು ಎಣಿಕೆ ಆದೇಶಕ್ಕೆ ಮಧ್ಯಂತರ ತಡೆ ನೀಡಿರುವ ಸುಪ್ರೀಂಕೋರ್ಟ್, ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರಿಯುವಂತೆ ಆದೇಶಿಸಿದೆ.
ಈ ಮೂಲಕ ಮರು ಮತ ಎಣಿಕೆಯಲ್ಲಿ ಗೆಲುವು ಸಾಧಿಸಿ ಇತ್ತೀಚೆಗಷ್ಟೇ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ ಡಿ.ಎನ್. ಜೀವರಾಜ್ ಅವರಿಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಹಾಗೂ ಅದರ ನಂತರ ನಡೆದ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿದೆ.
ಜೊತೆಗೆ ಮರು ಮತ ಎಣಿಕೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಸದ್ಯಕ್ಕೆ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಮತ್ತೆ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಮುಂದುವರಿಯಲಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಗೆಲುವು ಸಾಧಿಸಿದ್ದರು. ಬಿಜೆಪಿಯ ಡಿ.ಎನ್. ಜೀವರಾಜ್ ಸೋಲು ಅನುಭವಿಸಿದ್ದರು. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿತ್ತು. ಇತ್ತೀಚೆಗೆ ಮರು ಎಣಿಕೆಯಲ್ಲಿ ಬಿಜೆಪಿಯ ಜೀವರಾಜ್ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅವರನ್ನು ವಿಜೇತರಾಗಿ ಘೋಷಿಸಿ ಪ್ರಮಾಣಪತ್ರ ನೀಡಿತ್ತು. ಬಳಿಕ ಅವರು ಶಾಸಕರಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದರು. ಇದೀಗ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟಿಕೊಂಡಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm