ಬ್ರೇಕಿಂಗ್ ನ್ಯೂಸ್
13-05-26 10:18 pm HK News Desk ಕರ್ನಾಟಕ
ಬೆಂಗಳೂರು, ಮೇ 13 ಬಿಜೆಪಿ ಸರ್ಕಾರ ನಿಷೇಧಿಸಿದ್ದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಚಿಹ್ನೆಗಳ ಅನುಸರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರದಲ್ಲಿ 2022ರ ಆದೇಶವನ್ನು ಹಿಂಪಡೆದು ಸಿದ್ದರಾಮಯ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅಡಿಯಲ್ಲಿ ಮೇ 13ರಂದು ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು. ಸಮವಸ್ತ್ರ ಬದಲಿಸುವ, ಮಾರ್ಪಡಿಸುವ ಅಥವಾ ವಿಫಲಗೊಳಿಸುವಂತೆ ಇರಬಾರದು ಎಂದು ಸೂಚಿಸಲಾಗಿದೆ.
ಕೋರಮಂಗಲದ ಕಾಲೇಜಿನಲ್ಲಿ ಕಳೆದ ಏಪ್ರಿಲ್ 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸಮಯದಲ್ಲಿ ಪರೀಕ್ಷಾ ಹಾಲ್ಗೆ ಪ್ರವೇಶಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಕೇಳಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಅದೇ ನೆಪವನ್ನು ಮುಂದಿಟ್ಟು ಕಾಂಗ್ರೆಸ್ ಸರ್ಕಾರ ಭಾರೀ ವಿವಾದಕ್ಕೆ ಕಾರಣವಾಗಿದ್ದ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್ ಧಾರಣೆಗೆ ಅವಕಾಶ ನೀಡಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾವುದೇ ವಿದ್ಯಾರ್ಥಿಯನ್ನು ಸರ್ಕಾರದಿಂದ ಅನುಮತಿಸಲಾದ ಚಿಹ್ನೆಗಳನ್ನು ಧರಿಸಿದ್ದಕ್ಕಾಗಿ ತರಗತಿ ಕೊಠಡಿಗಳು, ಪರೀಕ್ಷಾ ಸಭಾಂಗಣಗಳು ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರವೇಶವನ್ನು ನಿರಾಕರಿಸಬಾರದು. ಯಾವುದೇ ವಿದ್ಯಾರ್ಥಿಯನ್ನು ಅಂತಹ ಚಿಹ್ನೆಗಳನ್ನು ಧರಿಸಲು ಅಥವಾ ತೆಗೆದುಹಾಕಲು ಒತ್ತಾಯಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
2022ರಲ್ಲಿ ಉಡುಪಿಯಲ್ಲಿ ಶುರುವಾದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದೇ ಹಿನ್ನೆಲೆಯಲ್ಲಿ 2022ರಲ್ಲಿ ಬಿಜೆಪಿ ಸರಕಾರ ಹೊರಡಿಸಿದ್ದ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸುವ ಕುರಿತ ಆದೇಶವನ್ನು ಸಿದ್ದರಾಮಯ್ಯ ಸರ್ಕಾರ ಇದೀಗ ಹಿಂಪಡೆದಿದೆ. ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಕದ ತಟ್ಟಲಾಗಿತ್ತು. ಹೈಕೋರ್ಟ್, ಈ ಕುರಿತು ನಿರ್ಣಯಿಸಲು ಆಯಾ ರಾಜ್ಯ ಸರ್ಕಾರಕ್ಕೆ ಅಧಿಕಾರ ಇದೆಯೆಂದು ಹೇಳಿದ್ದರೆ, ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಅರ್ಜಿ ಬಗ್ಗೆ ಇನ್ನೂ ಅಂತಿಮ ತೀರ್ಪು ಬಂದಿಲ್ಲ. ಕಾಂಗ್ರೆಸ್ ಸರ್ಕಾರ ಹಿಜಾಬ್ ನಿಷೇಧ ಆದೇಶ ಹಿಂಪಡೆದು ಒಂದು ಕಡೆಯಲ್ಲಿ ಮುಸ್ಲಿಮರ ವಿಶ್ವಾಸ ಪಡೆದರೆ, ಇನ್ನೊಂದು ಕಡೆ ಕೈಕಟ್ಟಿ ಕುಳಿತಿದ್ದ ಬಿಜೆಪಿಗೆ ಅಸ್ತ್ರ ಕೊಟ್ಟಂತಾಗಿದೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm