ಬ್ರೇಕಿಂಗ್ ನ್ಯೂಸ್
23-05-26 10:40 pm HK News Desk ಕರ್ನಾಟಕ
ಬೆಂಗಳೂರು, ಮೇ 23: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಜೂನ್ 1 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿವೆ. ಈ ವಿಚಾರದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೆವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ ಎಂದರು.
ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಾಗಂತ, ಸರ್ಕಾರದ ಯಾವುದೇ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಿಕೊಂಡು ಬರಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.
ಪ್ರಾಥಮಿಕ ತರಗತಿಯಿಂದ 12ನೇ ತರಗತಿಯ ವರೆಗೆ ಜನಿವಾರ, ಹಿಜಾಬ್, ಶಿವದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಆದರೆ ಹೊಸದಾಗಿ ಕೇಸರಿ ಶಾಲು ಧರಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm