ಬ್ರೇಕಿಂಗ್ ನ್ಯೂಸ್
23-05-26 11:37 pm HK News Desk ಕರ್ನಾಟಕ
ಬೆಂಗಳೂರು, ಮೇ 23: ತಮಿಳುನಾಡಿನಲ್ಲಿ ಕಮಾಲ್ ಮಾಡಿರುವ ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' ಪಕ್ಷವು ಕರ್ನಾಟಕ ರಾಜಕೀಯಕ್ಕೆ ಕಾಲಿಡಲು ಸಜ್ಜಾಗುತ್ತಿದೆ. ಬೆಂಗಳೂರು ಜಿಬಿಎ ಚುನಾವಣೆಯಲ್ಲಿ, ತಮಿಳು ಮತದಾರರು ಹೆಚ್ಚಿರುವ ವಾರ್ಡ್‌ಗಳಲ್ಲಿ ಸ್ಪರ್ಧಿಸಲು ವಿಜಯ್ ಯೋಜನೆ ರೂಪಿಸಿದ್ದಾರೆ.
'ಗ್ರೇಟರ್ ಬೆಂಗಳೂರು ಅಥಾರಿಟಿ' ಚುನಾವಣೆಯ ಮುನ್ಸೂಚನೆ ಸಿಗುತ್ತಿದ್ದಂತೆಯೇ, ಟಿವಿಕೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆದಿದೆ. ಬೆಂಗಳೂರಿನ ಒಟ್ಟು 369 ವಾರ್ಡ್‌ಗಳ ಪೈಕಿ ಕನಿಷ್ಠ 50 ವಾರ್ಡ್‌ಗಳ ಮೇಲೆ ಹಿಡಿತ ಸಾಧಿಸುವುದು ವಿಜಯ್ ಅಭಿಮಾನಿಗಳ ಮತ್ತು ಪಕ್ಷದ ತಂತ್ರಗಾರಿಕೆಯಾಗಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ತಮಿಳು ಭಾಷಿಕ ಮತದಾರರು ಹೆಚ್ಚಿದ್ದು ಯಾವುದೇ ಪಕ್ಷದ ಗೆಲುವಿನಲ್ಲಿ ನಿರ್ಣಾಯಕವಾಗಿದ್ದಾರೆ. ಶ್ರೀರಾಮಪುರ, ಹಲಸೂರು, ಶಿವಾಜಿನಗರ, ವಿವೇಕ್ ನಗರ, ಈಜಿಪುರ, ಮಡಿವಾಳ ಮತ್ತು ಶಾಂತಿನಗರದಂತಹ ವಾರ್ಡ್‌ಗಳಲ್ಲಿ ತಮಿಳು ಮತದಾರರ ಸಂಖ್ಯೆ ಹೆಚ್ಚಿದೆ. ಈ ವಾರ್ಡ್‌ಗಳನ್ನೇ ಗುರಿಯಾಗಿಸಿ ಟಿವಿಕೆ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿದೆ. ಈಗಾಗಲೇ ವಿಜಯ್ ಅಭಿಮಾನಿಗಳು ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿದ್ದು, ವಿಜಯ್ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗಲು ಕಾಯುತ್ತಿದ್ದಾರೆ.
ಬೆಂಗಳೂರಿನಲ್ಲಿ ದಳಪತಿ ವಿಜಯ್‌ಗೆ ಕೇವಲ ಸಿನಿಮಾ ಅಭಿಮಾನಿಗಳಲ್ಲದೆ, ಸಾಮಾಜಿಕವಾಗಿ ದೊಡ್ಡ ಅಭಿಮಾನಿ ಪಡೆಯೇ ಇದೆ. ವಿಜಯ್ ಸೂಚನೆಯಂತೆ ಈಗಾಗಲೇ ಹಲವು ಅಭಿಮಾನಿ ಸಂಘಗಳು ಜನಸೇವೆಯಲ್ಲಿ ತೊಡಗಿವೆ. ಅಭಿಮಾನಿಗಳನ್ನೇ ಪಕ್ಷದ ಅಭ್ಯರ್ಥಿಗಳನ್ನಾಗಿ ಮಾಡಿ, ಬೆಂಗಳೂರಿನಲ್ಲಿ ಪ್ರಾದೇಶಿಕ ಪಕ್ಷದ ಅಸ್ತಿತ್ವ ಕಂಡುಕೊಳ್ಳಲು ವಿಜಯ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm