ಬ್ರೇಕಿಂಗ್ ನ್ಯೂಸ್
03-06-26 01:18 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 03: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ನೇರ ವೀಕ್ಷಣೆ ಮಾಡಬಹುದಾಗಿದೆ.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ. ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿಗಳು ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನೋಡಬಹುದಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm