ಬ್ರೇಕಿಂಗ್ ನ್ಯೂಸ್
03-06-26 03:38 pm HK News Staffer ಕರ್ನಾಟಕ
ಬೆಂಗಳೂರು, , ಜೂನ್ 3: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಸಂಪುಟ ರಚನೆ ನಡೆಯುತ್ತಿರುವ ನಡುವೆಯೇ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಬಿಕೆ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಪಕ್ಷ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಅವರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡಲು ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಅಧಿಕೃತ ಘೋಷಣೆ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮದ ಬಳಿಕ ಹೊರಬೀಳುವ ಸಾಧ್ಯತೆ ಇದೆ.
ಸತೀಶ್ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿತ್ತು
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿ ಅವರ ಹೆಸರೂ ಗಂಭೀರವಾಗಿ ಪರಿಗಣನೆಯಲ್ಲಿತ್ತು. ಆದರೆ ಅವರ ಆಯ್ಕೆಗೆ ಪಕ್ಷದ ಒಂದು ಬಣದಿಂದ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಹೈಕಮಾಂಡ್ ಕೊನೆ ಕ್ಷಣದಲ್ಲಿ ಬಿಕೆ ಹರಿಪ್ರಸಾದ್ ಪರ ಒಲವು ತೋರಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷ ಸಂಘಟನೆಯ ಅನುಭವಕ್ಕೆ ಮನ್ನಣೆ
ದೀರ್ಘಕಾಲದ ರಾಜಕೀಯ ಅನುಭವ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ಬಿಕೆ ಹರಿಪ್ರಸಾದ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯ ಪಾತ್ರವಹಿಸಿರುವ ಹಿನ್ನೆಲೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಅಲ್ಲದೆ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಉದ್ದೇಶವೂ ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ.
‘ಇದು ನನ್ನ ವಿರುದ್ಧವಲ್ಲ, ಕಾಂಗ್ರೆಸ್ ವಿರುದ್ಧದ ಷಡ್ಯಂತ್ರ’
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ಸಚಿವ ಸ್ಥಾನದ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇನೆ ಎಂದು ಹೇಳಿದರು. "ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ನಾನು ಹೈಕಮಾಂಡ್ ಜೊತೆ ಚರ್ಚೆ ಮಾಡಿದ್ದೇನೆ. ಸಚಿವ ಸ್ಥಾನ ಕೊಡಬೇಕೋ, ಪಕ್ಷದ ಹುದ್ದೆ ಕೊಡಬೇಕೋ ಎಂಬುದನ್ನು ವರಿಷ್ಠರೇ ನಿರ್ಧರಿಸುತ್ತಾರೆ. ನನಗೆ ಇನ್ನೂ ಯಾವುದೇ ಅಧಿಕೃತ ಕರೆ ಬಂದಿಲ್ಲ. ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ಸಿಗಲಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಹೆಚ್ಚುವರಿ ಡಿಸಿಎಂ ಹುದ್ದೆಗಳ ಬಗ್ಗೆ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು" ಎಂದರು.
ಇದೇ ವೇಳೆ ತಮ್ಮ ವಿರುದ್ಧ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ಬಗ್ಗೆ ಪ್ರತಿಕ್ರಿಯಿಸಿ, "ನನ್ನ ವಿರುದ್ಧ ಷಡ್ಯಂತ್ರ ಮಾಡುವವರು ಮಾಡಲಿ. ನೂರು ಷಡ್ಯಂತ್ರಗಳಾದರೂ ಎದುರಿಸುತ್ತೇನೆ. ಇದು ನನ್ನನ್ನು ದುರ್ಬಲಗೊಳಿಸುವ ಪ್ರಯತ್ನವಲ್ಲ, ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸುವ ಷಡ್ಯಂತ್ರ" ಎಂದು ಹೇಳಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm