ಬ್ರೇಕಿಂಗ್ ನ್ಯೂಸ್
05-06-26 05:23 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 5: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆರಳಿದ ಅವರ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ರೆಡ್ಡಿಯವರ ಕಚೇರಿ ಮುಂಭಾಗದಲ್ಲಿ ಭಾರೀ ಪ್ರತಿಭಟನೆ, ಹೈಡ್ರಾಮಾ ನಡೆಸಿದರು.
ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗುತ್ತ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಅವರ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ತಳ್ಳಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಬಳಿಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.
ಪದಾಧಿಕಾರಿಗಳಿಂದ ಪಕ್ಷಕ್ಕೆ ರಾಜಿನಾಮೆ
ರಾಮಲಿಂಗಾ ರೆಡ್ಡಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಕಚೇರಿಯಲ್ಲಿ ಹೈಡ್ರಾಮಾವೇ ನಡೆದಿದ್ದು ಬೆಂಗಳೂರು ನಗರ, ವಾರ್ಡ್ ವ್ಯಾಪ್ತಿಯ ಹಲವಾರು ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm