ಬ್ರೇಕಿಂಗ್ ನ್ಯೂಸ್
09-06-26 01:27 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 9: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಒಟ್ಟು ಏಳು ಸ್ಥಾನಗಳಿದ್ದರೆ ಕಾಂಗ್ರೆಸ್ ಐವರನ್ನು ಕಣಕ್ಕಿಳಿಸಿದ್ದರೆ, ಜೆಡಿಎಸ್ ಸಂಖ್ಯಾಬಲ ಇಲ್ಲದಿದ್ದರೂ ಒಬ್ಬ ಅಭ್ಯರ್ಥಿಯನ್ನು ಹಾಕಿದೆ. ಇದು ಕುದುರೆ ವ್ಯಾಪಾರಕ್ಕೆ ವೇದಿಕೆಯಾಗಲಿದ್ದು ಸಿಎಂ ಡಿಕೆಶಿ ತನ್ನ ಆಪ್ತನನ್ನು ಕಣಕ್ಕಿಳಿಸಿ ಚದುರಂಗದಾಟಕ್ಕೆ ಮುಂದಾಗಿದ್ದಾರೆ.

ಕಾಂಗ್ರೆಸ್ ಸಿಎಂ ಡಿಕೆ ಆಪ್ತನಾಗಿರುವ ವಿನಯ್ ಕಾರ್ತಿಕ್ ಮತ್ತು ಜೆಡಿಎಸ್ ಕಡೆಯಿಂದ ಗೋವಿಂದರಾಜ್ ಅವರನ್ನು ಕಣಕ್ಕಿಳಿಸಿದ್ದು ಇಬ್ಬರೂ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಚುನಾವಣೆ ನಡೆಯೋದು ಬಹುತೇಕ ಖಚಿತವಾಗಿದ್ದು ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಕೆ ತಮ್ಮ ಪ್ರತಿಷ್ಠೆಯನ್ನು ಪಣಕ್ಕೊಡ್ಡಲಿದ್ದಾರೆ.
ವಿಧಾನಸಭೆ ಸದಸ್ಯರಿಂದ ಪರಿಷತ್ತಿಗೆ ಅಯ್ಕೆಯಾಗಬೇಕಾದ ಒಟ್ಟು ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಗಳವಾರ (ಜೂ.9) ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂನ್ 11 ಕೊನೆಯ ದಿನವಾಗಿದೆ. ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ಕಾಂಗ್ರೆಸ್ ನಾಲ್ಕು ಮತ್ತು ಬಿಜೆಪಿ ಎರಡು ಸ್ಥಾನಗಳನ್ನು ಅನಾಯಾಸವಾಗಿ ಗೆಲ್ಲಲಿದ್ದರೆ, ಉಳಿದ ಇನ್ನೊಂದು ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಗೆಲ್ಲುವ ಮತಕ್ಕಾಗಿ ಅನ್ಯ ಪಕ್ಷದ ಶಾಸಕರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಲೇಬೇಕಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಪರವಾಗಿ ಇಬ್ಬರು ಪಕ್ಷೇತರರು ಮತ್ತು ಬಿಜೆಪಿಯ ಉಚ್ಚಾಟಿತ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರ ಮತಗಳು ಸಿಗುವ ನಿರೀಕ್ಷೆ ಇದೆ. ಒಬ್ಬ ಅಭ್ಯರ್ಥಿಯ ಗೆಲುವಿಗೆ ತಲಾ 28 ಮತಗಳು ಬೇಕಾಗುತ್ತದೆ. ಕಾಂಗ್ರೆಸ್ ಬಳಿ 135, ಬಿಜೆಪಿ 62 ಮತ್ತು ಜೆಡಿಎಸ್ 18 ಶಾಸಕರನ್ನು ಹೊಂದಿದೆ. ಬಿಜೆಪಿಯಿಂದ ಉಚ್ಚಾಟನೆಗೊಂಡ ಬಸನಗೌಡ ಯತ್ನಾಳ್ ಸೇರಿ ಮೂವರಿದ್ದಾರೆ. ಕೆಆರ್ ಪಿಪಿಯಿಂದ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ, ದರ್ಶನ್ ಪುಟ್ಡಣ್ಣಯ್ಯ ತಲಾ ಒಂದು, ಪಕ್ಷೇತರ ಇಬ್ಬರಿದ್ದಾರೆ.

ಜೆಡಿಎಸ್ ಲೆಕ್ಕಾಚಾರ ಹೇಗಿದೆ ?
ಬಿಜೆಪಿ ಬಳಿ 62 ಮತಗಳಿದ್ದು, ಇಬ್ಬರು ಅಭ್ಯರ್ಥಿಗಳಿಗೆ ತಲಾ 29 ರಂತೆ ಹಂಚಿಕೆ ಮಾಡಿದರೆ, 4 ಮತಗಳು ಉಳಿಯುತ್ತವೆ ಎನ್ನೋದು ಜೆಡಿಎಸ್ ಲೆಕ್ಕ ಇರುವಂತಿದೆ. ಬಸನಗೌಡ ಪಾಟೀಲ ಯತ್ನಾಳ್ ಅವರ 1 ಮತ್ತು ಜನಾರ್ದನ ರೆಡ್ಡಿಯವರ 1 ಮತ ಸಿಕ್ಕಿದರೆ ಒಟ್ಟು 6 ಮತಗಳು ಸಿಗುತ್ತವೆ. ಇದರಿಂದ ಜೆಡಿಎಸ್ ಅಭ್ಯರ್ಥಿ ಬಲ 18ರ ಜತೆಗೆ 6 ಸೇರಿ 24 ಆಗುತ್ತದೆ. ಉಳಿದ ನಾಲ್ಕು ಮತಗಳನ್ನು ಬಿಜೆಪಿ ಉಚ್ಚಾಟಿತ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರ ಮತಗಳ ಜತೆಗೆ, ಕಾಂಗ್ರೆಸ್ನಿಂದ ಒಂದೆರಡು ಮತಗಳನ್ನು ಸೆಳೆಯಲು ಸಾಧ್ಯವೇ ಎಂಬ ಲೆಕ್ಕಾಚಾರದಲ್ಲಿದ್ದಾರೆ.
ಈಗಷ್ಟೇ ಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಈ ಚುನಾವಣೆ ಪ್ರತಿಷ್ಠೆಯಾಗಿದ್ದು ತಮ್ಮ ಆಪ್ತ ವಿನಯ್ ಕಾರ್ತಿಕ್ ಅವರನ್ನು ಗೆಲ್ಲಿಸಿಕೊಂಡು ಬರುವುದಾಗಿ ಶಪಥ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಮತ್ತು ಅವರೊಂದಿಗೆ ಇರುವ ಪಕ್ಷೇತರರ ಮತ ಸೆಳೆಯುವ ಸಾಧ್ಯತೆ ತೀರಾ ಕಷ್ಟ ಎನ್ನಲಾಗುತ್ತಿದೆ. ಇದಲ್ಲದೆ, ಎಚ್.ಡಿ.ಕುಮಾರಸ್ವಾಮಿ ಜತೆ ಮುನಿಸಿಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ ಮತದಾನದಿಂದ ದೂರ ಉಳಿದರೆ ಹಿನ್ನಡೆ ಆಗಬಹುದು ಎಂಬ ಆತಂಕ ಜೆಡಿಎಸ್ ಅಭ್ಯರ್ಥಿಗಿದೆ.
ಕಾಂಗ್ರೆಸ್ ತನ್ನ ನಾಲ್ಕು ಅಭ್ಯರ್ಥಿಗಳಿಗೆ ತಲಾ 28 ಮತಗಳನ್ನು ಹಂಚಿಕೆ ಮಾಡಿದರೆ 112 ಆಗುತ್ತದೆ. ಹೆಚ್ಚುವರಿಯಾಗಿ 23 ಮತ ಉಳಿಯುತ್ತದೆ. ಕಾಂಗ್ರೆಸ್ ಜತೆ ಗುರುತಿಸಿಕೊಂಡಿರುವ ದರ್ಶನ್ ಪುಟ್ಟಣ್ಣಯ್ಯ 1, ಪಕ್ಷೇತರರು 2 ಸೇರಿ ಒಟ್ಟು 26 ಆಗುತ್ತದೆ. ಬಿಜೆಪಿ ಉಚ್ಚಾಟಿತ ಇಬ್ಬರು ಶಾಸಕರು ಮತ ಹಾಕದೇ ಇದ್ದರೆ ಹೆಚ್ಚುವರಿಯಾಗಿ ಎರಡು ಅಥವಾ ಮೂರು ಮತಗಳು ಕಾಂಗ್ರೆಸ್ನ ಐದನೇ ಅಭ್ಯರ್ಥಿಗೆ ಅಗತ್ಯ. ವಿಧಾನಸಭೆ 224 ಸದಸ್ಯ ಬಲ ಹೊಂದಿದ್ದು, ವಿನಯಕುಲಕರ್ಣಿ ಸದಸ್ಯತ್ವ ಅನರ್ಹಗೊಂಡಿದೆ. ಡಿ. ಸುಧಾಕರ್ ನಿಧನರಾಗಿದ್ದಾರೆ. ಹೀಗಾಗಿ, 2 ಸ್ಥಾನಗಳು ಖಾಲಿ ಇವೆ. ಹೀಗಾಗಿ ಅಂತಿಮ ಫಲಿತಾಂಶದ ಬಗ್ಗೆ ಕುತೂಹಲ ಇದೆ.
ಚದುರಂಗ ಆಟ ಎಂದ ಡಿಕೆಶಿ
'ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರೂ ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರೂ ಹೇಳುವುದಿಲ್ಲ' ಎಂದು ಪರಿಷತ್ ಚುನಾವಣೆ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಕೇಳಿದಾಗ, 'ಯಾವ ಕಾಯಿ ಯಾವಾಗ ನಡೆಸಬೇಕು ಎಂಬುದು ಗೊತ್ತಿದೆ' ಎಂದರು.
ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ- ಬಿಕೆ
ಪರಿಷತ್ ಚುನಾವಣೆಗೆ ಜೆಡಿಎಸ್ನವರು ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದಾರೆ. ರಾಜಕೀಯದಲ್ಲಿ ಇವೆಲ್ಲ ಬೇಕಾಗುತ್ತದೆ. ರಾಜಕೀಯ ಮಾಡುವುದು ಎಂದರೆ ಇದೇ ಅಲ್ವಾ. ಆದರೆ, ನಮಗೆ ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ' ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm