ಬ್ರೇಕಿಂಗ್ ನ್ಯೂಸ್
17-06-26 06:35 pm HK News Desk ಕರ್ನಾಟಕ
ದಾವಣಗೆರೆ, ಜೂನ್ 17: ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದ ಬಾಡಿ ಬಿಲ್ಡರ್ವೊಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲ ಹೊತ್ತಲ್ಲೇ ದಿಢೀರ್ ಕುಸಿದು ಬಿದ್ದು ಕೊನೆಯುಸಿರೆಳೆದ ಆಘಾತಕಾರಿ ಘಟನೆ ದಾವಣಗೆರೆಯ ಕೆ.ಟಿ.ಜಂಬಣ್ಣನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕೆಟಿಜೆ ನಗರದ ನಿವಾಸಿ ಸುಶೀಲ್ ಕುಮಾರ್ (26) ಮೃತಪಟ್ಟ ಬಾಡಿ ಬಿಲ್ಡರ್. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿ ಗಳಿಸಿದ್ದ ಇವರು ಅಂತಾರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ವೇದಿಕೆಗಳಿಗೆ ರೆಡಿಯಾಗುತ್ತಿದ್ದರು. ಈ ನಡುವೆ ಸುಶೀಲ್ ಕುಮಾರ್ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಹೃದಯಾಘಾತದ ಶಂಕೆ ವ್ಯಕ್ತವಾಗಿದೆ.
ಮಂಗಳವಾರ ರಾತ್ರಿ 8-30 ಈ ಘಟನೆ ನಡೆದಿದ್ದು, ಜಿಮ್ ಮುಗಿಸಿಕೊಂಡು ಸುಶೀಲ್ ಮನೆಗೆ ಬಂದಿದ್ದರು. ತಲೆ ಸುತ್ತುತ್ತಿರುವುದಾಗಿ ಹೇಳಿದ ಕೆಲವೇ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ರಕ್ತದೊತ್ತಡ ಕಡಿಮೆಯಾಗಿ (ಲೋ ಬಿಪಿ) ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಯಾವಾಗಲೂ ತನ್ನ ಜತೆಗಿರುವ ಯುವಕರು ಏನಾದರೂ ಸಾಧನೆ ಮಾಡಬೇಕು, ನನಗಿಂತ ಎತ್ತರಕ್ಕೆ ಬೆಳೆಯಬೇಕು ಎಂದು ನಿತ್ಯ ಹತ್ತಾರು ಯುವಕರಿಗೆ ತರಬೇತಿ ನೀಡುತ್ತಿದ್ದ ಸುಶೀಲ್ ಅವರನ್ನು ಕಳೆದುಕೊಂಡು ಸ್ನೇಹಿತರು ಕಣ್ಣೀರಿಟ್ಟರು.
ಸುಶೀಲ್ ಕುಮಾರ್ ಅವರ ತಾಯಿ ದೇವಮ್ಮ ಜಿಲ್ಲಾಸ್ಪತ್ರೆಯಲ್ಲಿ ಡಿ ಗ್ರೂಪ್ನಲ್ಲಿ ಕೆಲಸ ಮಾಡುತ್ತಿದ್ದು, ಮುಂದೆ ನನಗೆ ಆಸರೆ ಯಾರು ಎಂದು ಗೋಳಾಡುತ್ತಿರುವುದು ಎಲ್ಲರನ್ನೂ ಭಾವುಕರನ್ನಾಗಿಸಿತು. ಯಾವಾಗಲೂ ಲವಲವಿಕೆಯಿಂದ ಇದ್ದ ಯುವಕ ಹೀಗೆ ಕುಸಿದು ಬಿದ್ದು ಇಹಲೋಕ ತ್ಯಜಿಸಿರುವುದು ಸ್ನೇಹಿತರು ಸೇರಿದಂತೆ ನೆರೆಹೊರೆಯವರಿಗೆ ದಿಗ್ಭ್ರಮೆ ಮೂಡಿಸಿದೆ.
ಇತ್ತೀಚೆಗೆ, ಒಂದನೇ ತರಗತಿಯ ವಿದ್ಯಾರ್ಥಿಯೋರ್ವ ಶಾಲಾ ಅವರಣದಲ್ಲಿಯೇ ದಿಢೀರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಸರ್ಕಾರಿ ಶಾಲೆಯಲ್ಲಿ ನಡೆದಿತ್ತು.
ತ್ರಿಲೋಕ್ ಜೈನ್ (6) ಎಂಬಾತನೇ ಸಾವನ್ನಪ್ಪಿದ ಬಾಲಕ. ತ್ರಿಲೋಕ್ ಸಂಜೆ ಶಾಲೆ ಮುಗಿದ ನಂತರ ಮನೆಗೆ ಹೋಗಲು ಮೈದಾನದಲ್ಲಿ ನಿಂತಿದ್ದ. ಈ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಶಾಲಾ ಶಿಕ್ಷಕರು ಉಪಚರಿಸಿದ್ದರು. ಬಳಿಕ ಸ್ಥಳೀಯ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಇಲ್ಲದ ಕಾರಣ ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ದಾರಿ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ. ತ್ರಿಲೋಕ್ ಹಾಳಸಸಿ ಗ್ರಾಮದ ಪಕ್ಕದ ಕೊಡನವಳ್ಳಿ ನಿವಾಸಿಗಳಾದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾಗಿದ್ದ. ಈತ ಇದೇ ಜೂನ್ 1ರಂದು ಶಾಲೆಗೆ ದಾಖಲಾಗಿದ್ದ
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm