ಬ್ರೇಕಿಂಗ್ ನ್ಯೂಸ್
21-06-26 02:18 pm HK News Staffer ಕರ್ನಾಟಕ
ಬೆಂಗಳೂರು, ಜೂ 21: ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆಣೆ ಪ್ರಮಾಣ ಮಾಡಿಸಲು ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದಾರೆ.
ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಈ ವಾರ ಅಥವಾ ಮುಂದಿನ ವಾರ ಸಭೆ ನಡೆಯುವ ನಿರೀಕ್ಷೆಯಿದೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಪಕ್ಷದ ಎಲ್ಲಾ 63 ಶಾಸಕರಿಂದಲೂ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿರುವ ಮಂಜುನಾಥ ಸ್ವಾಮಿಯ ಮುಂದೆ ಆಣೆ-ಪ್ರಮಾಣ ಮಾಡಿಸಲು ಕಮಲ ಪಾಳಯ ನಿರ್ಧರಿಸಿದೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್ ಚುನಾವಣೆಯಲ್ಲಿ ನಮ್ಮಿಂದ 4 ಅಡ್ಡ ಮತದಾನ ಆಗಿದೆ ಎಂಬ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು, ಶಾಸಕರ ನಡವಳಿಕೆ ಬಗ್ಗೆ ಬೇಸರ ಪಟ್ಟಿದ್ದಾರೆ. ಹೀಗಾಗಿ ಎಲ್ಲ 63 ಶಾಸಕರ ಮೇಲೂ ಅನುಮಾನ ಪಡುವಂತಾಗಿದೆ.
ನಿನ್ನೆ ನಿತಿನ್ ನಬಿನ್ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ದೆಹಲಿಗೆ ನಾನು ಹಾಗೂ ಅಶೋಕ್ ಅವರು ಹೋಗುತ್ತಿದ್ದು, ಈ ವಾರದಲ್ಲೇ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಅಶೋಕ್ ಅವರ ಜತೆ ಚರ್ಚೆ ಮಾಡುತ್ತೇನೆ. ತಾಯಿಗೆ ದ್ರೋಹ ಮಾಡಿದ ಶಾಸಕರು ಯಾರೆಂದು ಶ್ರೀಕ್ಷೇತ್ರದಲ್ಲೇ ಗೊತ್ತಾಗಲಿ ಎಂದವರು ತಿಳಿಸಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm